ಸಿದ್ದು ಸರ್ಕಾರ ಉರುಳಿಸಲು ಶಾಸಕರಿಗೆ 59 ಕೋ.ರೂ.ಆಮಿಷ ಆರೋಪ; ತನಿಖೆಗೆ ಹಿಂದೇಟು ಯಾಕೆ ಎಂದು ವಿಜಯೇಂದ್ರ ಪ್ರಶ್ನೆ

0
by-Vijayendra-300x196

ಬೆಂಗಳೂರು: ಶಾಸಕರಿಗೆ ಬಿಜೆಪಿ ನಾಯಕರು 50 ಕೋಟಿ ರೂ ಆಮಿಷ ಒಡ್ಡಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿದೆ. ಇದೇ ವೇಳೆ ಸಿಎಂ ಮಾಡಿರುವ ಆರೋಪ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.‌ 50 ಕೋಟಿ ರೂ ಆಮಿಷ ಬಗ್ಗೆ ತನಿಖೆ ನಡೆಸುವಂತೆ ವಿಜಯೇಂದ್ರ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ, 50 ಕೋಟಿ ರೂಪಾಯಿ ಆಮಿಷದ ಮೂಲ ಯಾವುದು ಎಂಬುದನ್ನು ತನಿಖೆ ನಡೆಸಿ ಬಹಿರಂಗಪಡಿಸಿ ಎಂದು ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರಿಗೂ ಸಲಹೆ ಎದಿರೇಟು ನೀಡಿದ್ದಾರೆ.

ಸರ್ಕಾರ ಉರುಳಿಸಲು 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಮಿಷ ನೀಡಲಾಗಿದೆ ಎಂಬ ಸಿದ್ದರಾಮಯ್ಯ ಅವರ ಆರೋಪ ನಿರಾಧಾರ ಎಂದು ವಿಜಯೇಂದ್ರ ಹೇಳಿದ್ದಾರೆ.

Leave a Reply

Your email address will not be published. Required fields are marked *