ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

0
- DKS - D.K.Shivakumar

ಬೆಂಗಳೂರು: ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

“ಈ ಚುನಾವಣೆಗಳ ಸಿದ್ಧತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು ವಿಭಾಗವಾರು ಸಮಿತಿ ರಚಿಸಲಿದ್ದೇವೆ. ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು. ಎಲ್ಲೆಲ್ಲಿ ನಾಯಕರ ಮಧ್ಯೆ ಹೊಂದಾಣಿಕೆ ಸಾಧಿಸಿ, 50% ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡುವ ಬಗ್ಗೆ ವರದಿ ಸಲ್ಲಿಸಬೇಕು” ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ಜಾಗ ಇದ್ದರೆ ಮಾತ್ರ ಕಚೇರಿ ಶಂಕುಸ್ಥಾಪನೆ

100 ಕಾಂಗ್ರೆಸ್ ಕಚೇರಿ ನಿರ್ಮಿಸುವ ಹಿನ್ನೆಲೆಯಲ್ಲಿ ಇವುಗಳ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಲು ದಿನಾಂಕ ನಿಗದಿ ಮಾಡುವಂತೆ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದೇನೆ. ಈ ಕಾರ್ಯಕ್ಕೆ ನಾಲ್ಕು ವಿಭಾಗಗಳಲ್ಲಿ ಸಮಿತಿ ರಚಿಸಲಾಗಿದೆ” ಎಂದು ತಿಳಿಸಿದರು.

“ಕಚೇರಿ ಕಟ್ಟಡ ನಿರ್ಮಾಣ ಮಾಡುವ ಜಾಗ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ನೋಂದಣಿ ಆಗದಿದ್ದರೆ ಅಲ್ಲಿ ನಮ್ಮ ನಾಯಕರಿಂದ ಶಂಕುಸ್ಥಾಪನೆ ಮಾಡಿಸುವುದಿಲ್ಲ. ಈ ಕಟ್ಟಡ ನಿರ್ಮಾಣದ ಜಾಗ ವೈಯಕ್ತಿಕ ಹೆಸರು, ಬೇರೆ ಟ್ರಸ್ಟ್ ಹೆಸರಿನಲ್ಲಿ ಇರುವಂತಿಲ್ಲ” ಎಂದರು.

“ಇನ್ನು ಆನಂದರಾವ್ ವೃತ್ತದ ಬಳಿ ಇರುವ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಸಿದ್ಧಪಡಿಸಲಾಗಿದೆ. ಈ ಕಟ್ಟಡದ ಶಂಕುಸ್ಥಾಪನೆಯನ್ನು ಅದೇ ದಿನ ನೆರವೇರಿಸಲಾಗುವುದು” ಎಂದು ತಿಳಿಸಿದರು.

Leave a Reply

Your email address will not be published. Required fields are marked *

You may have missed