“ಕಲಾವಿದರು ಯಾರ ಸ್ವತ್ತೂ ಅಲ್ಲ, ಪಕ್ಷದ ಕಾರ್ಯಕರ್ತರೂ ಅಲ್ಲ”: ಡಿಕೆಶಿಗೆ ಅಶೋಕ್ ಟಾಂಗ್

0
Movie- Film

ಬೆಂಗಳೂರು: ಕಲಾವಿದರ ನೆಟ್ ಬೋಲ್ಟ್ ಟೈಟ್ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, “ಕಲಾವಿದರು ಯಾರ ಸ್ವತ್ತೂ ಅಲ್ಲ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೂ ಅಲ್ಲ” ಎಂದಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ‘X’ನಲ್ಲಿ ಬರೆದುಕೊಂಡಿರುವ ಅಶೋಕ್, ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಅವರು ಡಿಕೆಶಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಮಾಜದಲ್ಲಿ ಎಲ್ಲರೂ ತಮಗೆ ಮತ್ತು ತಮ್ಮ ಪಕ್ಷಕ್ಕೆ ಸೆಲ್ಯೂಟ್ ಹೊಡೆದು, ತಮ್ಮ ಅಡಿಯಾಳುಗಳಂತೆ ನಡೆದುಕೊಳ್ಳಬೇಕು ಎನ್ನುವ ಕೆಟ್ಟ ಮನಸ್ಥಿತಿಯಿಂದ ಹೊರಗೆ ಬನ್ನಿ. ಕಲಾವಿದರು ಯಾರ ಸ್ವತ್ತೂ ಅಲ್ಲ. ಕಲಾವಿದರಿಗೆ ಅವರ ವಿವೇಚನೆಗೆ ತಕ್ಕಂತೆ ನಡೆದುಕೊಳ್ಳುವ, ಯಾರ ಜೊತೆ ಬೇಕಾದರೂ ಗುರುತಿಸಿಕೊಳ್ಳುವ ಅಥವಾ ಗುರುತಿಸಿಕೊಳ್ಳದಿರುವ ಸ್ವಾತಂತ್ರ್ಯವಿದೆ, ಹಕ್ಕಿದೆ ಎಂದು ಅಶೋಕ್ ಪ್ರತಿಪಾದಿಸಿದ್ದಾರೆ.

ಕಲಾವಿದರು ನಿಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ. ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿ ಕಲಾವಿದರನ್ನು ನಡೆಸಿಕೊಳ್ಳಬೇಡಿ. ಕಲಾವಿದರಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದು ಅಶೋಕ್ ಡಿಕೆಶಿ ಅವರನ್ನು ಕೆಣಕಿದ್ದಾರೆ.

ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ @DKShivakumar ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ.

ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ… pic.twitter.com/5JgeiHkKSd
— R. Ashoka (@RAshokaBJP) March 2, 2025

Leave a Reply

Your email address will not be published. Required fields are marked *