darshan

ಬೆಂಗಳೂರು: ತನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಕಂಡು ನಟ ಸರ್ಶನ್ ಬೇಸರ ವ್ಯಕ್ತಪಡಿಸಿದ್ಫ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಇನ್ಸಾಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ದರ್ಶನ್, ಇನ್ನೂ ಸಾಧನೆ ಮಾಡದ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ.

‘ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಅದರಿಂದ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಬೇಕಿದ್ದ ಚಂದುನನ್ನು ಈ ಚಿತ್ರದಿಂದ ಹೊರಗಿಡಲಾಗಿದೆ, ಚಂದು ಅಥವಾ ನನ್ನ ಮಗ ವಿನೀಶ್ ಗೆ ನೀವು ಅಭಿಮಾನದಿಂದಲೋ ಅಥವಾ ಅವರೊಂದಿಗೆ ಚೆನ್ನಾಗಿ ಗುರುತಿಸಿಕೊಂಡರೆ ನನಗೆ ಹತ್ತಿರವಾಗಬಹುದು ಎಂದು ನೀವು ಭಾವಿಸಿದರೆ ಅದನ್ನು ನಿಮ್ಮ ಮನಸಿನಿಂದ ತೆಗೆದು ಹಾಕಿ ನೀವು ಹೀಗೆ ಮಾಡುವುದು ನನಗೆ ಸ್ವಲ್ಪವೂ ಇಷ್ಟವಾಗುವುದಿಲ್ಲ..’ ಎಂದವರು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed