police hoysala crime

ಚಿತ್ರದುರ್ಗ: ಚಿತ್ರದುರ್ಗ ನಗರ ಠಾಣೆ ಪಿಎಸ್​ಐ ಗಾದಿಲಿಂಗಪ್ಪ ಮೇಲೆ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ರಸ್ತೆ ಮೇಲೆ ತುಮಕೂರು ಜಿಲ್ಲೆ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಗುಂಪಾಗಿ ನಿಂತಿದ್ದನ್ನು ಪಿಎಸ್​ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಾರೆ. ಆ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಪಿಎಸ್​ಐ ಗಾದಿಲಿಂಗಪ್ಪ ಅವರ ಕೈ ಬೆರಳಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ನಡುವೆ, ಹಲ್ಲೆ ಆರೋಪದಲ್ಲಿ ಹನುಮಂತೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಪೊಲೀಸರೇ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹನುಮಂತೇಗೌಡ ಆರೋಪಿಸಿದ್ದಾರೆ. ಇದೆಲ್ಲದರ ನಡುವೆ, ಬಿಜೆಪಿ ನಾಯಕ ಹನುಮಂತೇಗೌಡ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You may have missed