ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ಪದಗ್ರಹಣ

0
Rajeev Chandrasekhar

ತಿರುವನಂತಪುರಂ: ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅಧಿಕಾರ ಸ್ವೀಕರಿಸಿದ್ದಾರೆ. ಸೋಮವಾರ ನಡೆದ ಸಮಾರಂಭದಲ್ಲಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ತಿರುವನಂತಪುರದಲ್ಲಿ ನಡೆದ ಬಿಜೆಪಿ ನಾಯಕರ ಸಭೆಯಲ್ಲಿ ಕೇಂದ್ರ ವೀಕ್ಷಕರಾದ ಪ್ರಹ್ಲಾದ್ ಜೋಶಿ ಅವರು ರಾಜೀವ್‌ ಚಂದ್ರಶೇಖರ್‌ ಆಯ್ಕೆಯನ್ನು ಪ್ರಕಟಿಸಿದರು. ರಾಜೀವ್ ಚಂದ್ರಶೇಖರ್ ಅವರೊಬ್ಬರೇ ಭಾನುವಾರ ನಾಮಪತ್ರ ಸಲ್ಲಿಸಿದ್ದು ಅವರ ಆಯ್ಕೆಯನ್ನು ಸೋಮವಾರ ಪ್ರಕಟಿಸಲಾಯಿತು. ಅನಂತರ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಕೇರಳ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದರಾಜೀವ್ ಚಂದ್ರಶೇಖರ್ ಅವರನ್ನು ಅಭಿನಂಧಿಸಿರುವ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ‘ನಿಮ್ಮ ರಾಜಕೀಯ ಚಾತುರ್ಯ ಮತ್ತು ಬಲವಾದ ಸಂಘಟನೆಯು ಕೇರಳದ ರಾಜಕೀಯ ಭೂದೃಶ್ಯವನ್ನು ಖಂಡಿತವಾಗಿಯೂ ಬದಲಾಯಿಸುತ್ತದೆ’ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *