ಸುಂಕ ಸಮರ: ಅಮರಿಕ ವಿರುದ್ಧ ತಿರುಗಿಬಿದ್ದ ಚೀನಾ, ಐರೋಪ್ಯ ರಾಷ್ಟ್ರಗಳಿಂದಲೂ ರಣತಂತ್ರ

ಬೀಜಿಂಗ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೆರಿಗೆ ಹೆಚ್ಚಳ ಕ್ರಮವು ಜಾಗತಿಕ ವ್ಯಾಪಾರ ಯುದ್ಧಕ್ಕೆ ನಾಂದಿ ಹಾಡಿದಂತಿದೆ. ವಿವಿಧ ರಾಷ್ಟ್ರಗಳ ಉತ್ಪನ್ನಗಳಿಗೆ ಭಾರೀ ಪ್ರಮಾಣದಲ್ಲಿ ಆಮದು ಸುಂಕ ವಿಧಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರದ ವಿರುದ್ಧ ಅನೇಕ ರಾಷ್ಟ್ರಗಳು ಸಿಡಿದೆದ್ದಿವೆ. ಅದರಲ್ಲೂ ಚೀನಾ ಸುಂಕದಿಂದಲೇ ಎದಿರೇಟು ನೀಡಿದೆ.
ಡೊನಾಲ್ಡ್ ಟ್ರಂಪ್ ಅವರಿಗೆ ಸಡ್ಡು ಹೊಡೆಡಿರುವ ಚೀನಾ ದೇಶ ಅಮೆರಿಕ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಶೇ.34ಕ್ಕೆ ಏರಿಕೆ ಮಾಡಿದೆ. ಚೀನಾ ದೇಶದ ಈ ಘೋಷಣೆ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆ ಸಂಕಷ್ಟದಲ್ಲಿ ಸಿಲುಕಿದೆ. ಜಗತ್ತಿನಾದ್ಯಂತ ಷೇರುಮಾರುಕಟ್ಟೆಗಳು ತೀವ್ರವಾಗಿ ಕುಸಿಯ ತೊಡಗಿದೆ.
ಯೂರೋಪಿಯನ್ ಒಕ್ಕೂಟದ ಹಲವು ರಾಷ್ಟ್ರಗಳು ಕೂಡಾ ಟ್ರಾಂಪ್ ವಿರುದ್ಧ ತಿರುಗಿಬೀಳಲು ಮುಂದಾಗಿವೆ ಎನ್ನಲಾಗುತ್ತಿದೆ.