ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ED ದೋಷಾರೋಪ ಪಟ್ಟಿ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮವು ಬಿಜೆಪಿ ಸರ್ಕಾರದ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿಬುಧವಾರ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ ಎಂದು ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಇ.ಡಿ ಯನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದಕ್ಕೆ ನಾವು ಹೆದರಲ್ಲ.#NationalHerald pic.twitter.com/kZ5bzaYK5w
— Siddaramaiah (@siddaramaiah) April 16, 2025