ಸುಹಾಸ್ ಶೆಟ್ಟಿ ಹಂತಕರನ್ನು ಕೂಡಲೇ ಬಂಧಿಸಿ: ಸರ್ಕಾರಕ್ಕೆ BSY ಆಗ್ರಹ

0
bay - BS Yadiyurappa

ಬೆಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಅತ್ಯಂತ ಆಘಾತವನ್ನುಂಟು ಮಾಡಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ದುಷ್ಕರ್ಮಿಗಳಿಗೆ ಕಾನೂನಿನ ಕಿಂಚತ್ ಭಯವೂ ಇಲ್ಲದಂತಾಗಿದ್ದು, ಇಂತಹ ಅಮಾನುಷ ಅಪರಾಧಗಳು ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು-ಸುವ್ಯವಸ್ಥೆಗೆ ಕನ್ನಡಿ ಹಿಡಿದಿದೆ. ರಾಜ್ಯ ಸರ್ಕಾರ ಕೂಡಲೇ ಅಪರಾಧಿಗಳನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *