ಭಾರತದ ಆಪರೇಷನ್ ಸಿಂಧೂರ್ ಬೆನ್ನಲ್ಲೇ ಪಾಕಿಸ್ತಾನಕ್ಕೆ ಬಂಡೂಕೋರರ ಶಾಕ್..

0
Pakistan-Islamabad-Police-1-300x169-1-150x150

ಇಸ್ಲಾಮಾಬಾದ್ : ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನಕ್ಕೆ ಬಲೂಚಿಸ್ತಾನ ಬಂಡೂಕೋರರು ಸವಾಲಾಗಿ ಮಾರ್ಪಟ್ಟಿದ್ದಾರೆ. ಬಲೂಚಿಸ್ತಾನ ಲಿಬರೇಶನ್ ಆರ್ಮಿ (ಬಿಎಲ್‌ಎ) ನಡೆಸಿದ ಭಯಾನಕ ದಾಳಿಯಲ್ಲಿ 14 ಮಂದಿ ಪಾಕಿಸ್ತಾನ ಸೈನಿಕರು ಹತರಾಗಿದ್ದಾರೆ.
ಬಲೂಚಿಸ್ತಾನದ ಕಚ್ಚಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನಾ ವಾಹನದ ಮೇಲೆ ಸುಧಾರಿತ ಸ್ಫೋಟಕ ಬಳಸಿ ದಾಳಿ ಮಾಡಲಾಗಿದೆ. ದಾಳಿಯಲ್ಲಿ ಸೇನಾ ವಾಹನದಲ್ಲಿದ್ದ 14 ಮಂದಿ ಬಲಿಯಾಗಿದ್ದಾರೆ ಎನ್ನಲಾಗಿದೆ.

ಬಲೂಚಿಸ್ತಾನ ಲಿಬರೇಶನ್ ಆರ್ಮಿ ಈ ದಾಳಿಯನ್ನು ಸಮರ್ಥಿಸಿಕೊಂಡು ಹೇಳಿಕೆಯನ್ನು ಹಾಗೂ ದಾಳಿಯ ವೀಡಿಯೊವನ್ನು ಬಿಡುಗಡೆ ಮಾಡಿದೆ.

Leave a Reply

Your email address will not be published. Required fields are marked *