ಹೆಚ್ಚುತ್ತಿರುವ ಕೊರೋನಾ ಸೋಂಕು; ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ದೇಶದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಗಾಪುರ ಮತ್ತು ಹಾಂಗ್ ಕಾಂಗ್‌ನಂತಹ ದೇಶಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವುದನ್ನು ಉಲ್ಲೇಖಿಸಿದ್ದಾರೆ. ವಿದೇಶದಿಂದ ಬರುವ ಪ್ರಯಾಣಿಕರನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ಹೊರಹಾಕಿದರು.
‘ಇಲ್ಲಿಯೂ ಕೋವಿಡ್ -19 ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ. ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಅವರು ಹೇಳಿದರು