ಮುಸ್ಲಿಂ ಸಮುದಾಯಕ್ಕೆ ‘ವಸತಿ ಮೀಸಲಾತಿ’: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ರವಿ ವಾಗ್ಬಾಣ

0
ct ravi - Siddaramaiah

ಬೆಂಗಳೂರು: ರಾಜ್ಯ ಸರ್ಕಾರದ ವಸತಿ ಯೋಜನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿರುವುದಕ್ಕೆ ಬಿಜೆಪಿ ಆಕ್ಷೇಪಿಸಿದ್ದು, ಇದು ಅಲ್ಪಸಂಖ್ಯಾತರನ್ನು ಓಲೈಸುವ ರಾಜಕೀಯ ಯತ್ನವಾಗಿದೆ ಎಂದು ಟೀಕಿಸಿದೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಸಿಟಿ ರವಿ, ಅಲ್ಪಸಂಖ್ಯಾತರ ಮತ ಬ್ಯಾಂಕ್‌ ರಾಜಕಾರಣಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೀಗ ವಸತಿ ಯೋಜನೆ ಕೂಡಾ ಉಪಯೋಗಿಸುತ್ತಿದೆ. ಸಮಾಜದ ಎಲ್ಲ ವರ್ಗಗಳಿಗೂ ಸೌಲಭ್ಯ ದೊರೆಯಬೇಕು ಎಂಬುದು ಸಂವಿಧಾನದ ಆಶಯ. ಆದರೆ ಸರ್ಕಾರ ಅದರ ವಿರುದ್ಧ ನಡೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಧನ್ ಯೋಜನೆ, ಉಚಿತ ಗ್ಯಾಸ್ ಸಿಲಿಂಡರ್‌ ವಿತರಣೆ, ಆಯುಷ್ಮಾನ್ ಭಾರತ್ ಯೋಜನೆಯಡಿ ಆರೋಗ್ಯ ವಿಮೆ ನೀಡಿದಾಗ ಯಾರಿಂದಲೂ ಧರ್ಮ ಅಥವಾ ಜಾತಿಯನ್ನು ಕೇಳಲಿಲ್ಲ ಎಂದು ಸಿಟಿ ರವಿ ಹಿಗ್ಗೆ ಹೇಳಿದರು.

ವಾಸ್ತವದಲ್ಲಿ ಕಾಂಗ್ರೆಸ್ ಪಕ್ಷ ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಸಂವಿಧಾನದ ಮೌಲ್ಯಗಳಿಗೆ ಧಕ್ಕೆ ತರುತ್ತಿದೆ. ಬೆಂಗಳೂರಿನಲ್ಲಿ ವಾಸವಿರುವ ಬಾಂಗ್ಲಾದೇಶ ಮೂಲದ ವಲಸೆಕೋರರಿಗೆ ಮನೆ ನೀಡುವ ಮೂಲಕ ಕಾಂಗ್ರೆಸ್ ಅಪಾಯಕಾರಕ ಷಡ್ಯಂತ್ರ ನಡೆಸುತ್ತಿದೆ ಎಂದು ಸಿಟಿ ರವಿ ಗಂಭೀರ ಆರೋಪ ಮಾಡಿದರು.

Leave a Reply

Your email address will not be published. Required fields are marked *