ರಾಜ್ಯದಲ್ಲಿ ಮಳೆ ಬಿರುಸುಗೊಳ್ಳಲಿದೆ: ಹಲವು ಜಿಲ್ಲೆಗಳಿಗೆ ಎಚ್ಚರಿಕೆ

0
udupi-rain2-300x165

ಬೆಂಗಳೂರು: ಆಗಸ್ಟ್‌ 24ರವರೆಗೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಆಗಸ್ಟ್‌ 19ರಂದು (ಮಂಗಳವಾರ) ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಧಾರವಾಡ, ಚಿಕ್ಕಮಗಳೂರು, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಕನ್ನಡ, ಬೆಳಗಾವಿ, ಬೀದರ್‌, ಕಲಬುರಗಿ, ವಿಜಯಪುರ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಜಾರಿಯಲ್ಲಿದೆ. ಬಾಗಲಕೋಟ, ಯಾದಗಿರಿ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

Leave a Reply

Your email address will not be published. Required fields are marked *