ರಾಜ್ಯ ಡಿಜಿ-ಐಜಿಯಾಗಿ ಎಂ. ಸಲೀಂ ; ಸರ್ಕಾರದ ಆದೇಶ

0
Dr. M A SALEEM IPS

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ. ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.

1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಡಾ. ಸಲೀಂ ಅವರು ಅಲೋಕ್ ಮೋಹನ್ ನಿವೃತ್ತಿಯಾದ ಬಳಿಕ ಡಿಜಿಪಿ ಹಾಗೂ ಐಜಿಪಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು.

ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ಡಾ. ಸಲೀಂ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ, ಯುಪಿಎಸ್‌ಸಿಯಿಂದ ಆಯ್ಕೆ ಪಟ್ಟಿ ಬಂದ ತಕ್ಷಣ ನಿಯಮಿತ ಡಿಜಿಪಿ ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಅದರಂತೆ ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *