ಭಾರತ-ಅಮೆರಿಕಾ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಬದ್ಧ; ಮೋದಿ ಭರವಸೆ

0

ನವದೆಹಲಿ: ಭಾರತ-ಅಮೆರಿಕಾ ನಡುವೆ ತೆರಿಗೆ ಸಮರ ಸಾಗಿದ್ದರೂ, ವೈರುಧ್ಯದ ಸನ್ನಿವೇಶದ ನಡುವೆಯೂ ಉಧಾಯ ರಾಷ್ಟ್ರಗಳ ನಾಯಕರ ನಡುವೆ ಶುಭಾಶಯಗಕ್ಲ ವಿನಿಮಯ ಸಾಗಿದೆ. ಅಮೆರಿಕಾದ ಡೊನಾಲ್ಡ್ ಟ್ರಂಪ್ ಸರ್ಕಾರವು ಪ್ರಮುಖ ಭಾರತೀಯ ಸರಕುಗಳ ಮೇಲೆ ಶೇಕಡಾ 50ರಷ್ಟು ಸುಂಕವನ್ನು ವಿಧಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಮೊದಲ ನೇರ ಸಂಭಾಷಣೆ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಡೊನಾಲ್ಡ್ ಟ್ರಂಪ್ ಜನ್ಮದಿನದ ಶುಭಾಶಯ ಕೋರಿರುವ ಬೆಳವಣಿಗೆ ಗಮನಸೆಳೆದಿದೆ.

ಪ್ರಧಾನಿ ನರೇಂದ್ರ ಮೋದಿ ಬುಧವಾರ 75 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂಬಂಧ ಮಂಗಳವಾರ ಅಮೆರಿಕ ಅಧ್ಯಕ್ಷರು ಮೋದಿಗೆ ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಭಾರತ-ಯುಎಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ತಮ್ಮ ಬದ್ಧತೆಯನ್ನು ಈ ಸಂದರ್ಭದಲ್ಲಿ ಉಭಯ ನಾಯಕರು ಪುನರುಚ್ಚರಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ‘ಸ್ನೇಹಿತ, ಅಮೆರಿಕ ಅಧ್ಯಕ್ಷ ಟ್ರಂಪ್, ನನ್ನ 75 ನೇ ಹುಟ್ಟುಹಬ್ಬಕ್ಕೆ ಕರೆ ಮಾಡಿ ಶುಭಾಶಯ ತಿಳಿಸಿರುವುದಕ್ಕೆ ನಿಮಗೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.

‘ನಿಮ್ಮಂತೆ, ನಾನು ಸಹ ಭಾರತಅಮೆರಿಕಾ ಸಮಗ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಂಪೂರ್ಣವಾಗಿ ಬದ್ಧನಾಗಿದ್ದೇನೆ. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ನಿಮ್ಮ ಉಪಕ್ರಮಗಳನ್ನು ನಾವು ಬೆಂಬಲಿಸುತ್ತೇವೆ’ ಎಂದು ಮೋದಿ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *