ನರೇಂದ್ರ ಮೋದಿ ಜನ್ಮದಿನ ಅಂಗವಾಗಿ ತುಮಕೂರಿನಲ್ಲಿಸೇವಾ ಕಾರ್ಯಕ್ರಮಗಳು

0
Narendra Modi

ತುಮಕೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬುಧವಾರ ತುಮಕೂರಿನಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳು ಜರುಗಿದವು.

ಶ್ರೀ ಶಿವಕುಮಾರ ಮಹಾಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ, ಬಳಿಕ ರೈಲ್ವೆ ಪೌರ ಕಾರ್ಮಿಕರಿಗೆ ಗೌರವ ಸಲ್ಲಿಸಿದರು.

ಸಂಸದ ಕಚೇರಿಯಲ್ಲಿ ದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರಕ್ಕೆ ಚಾಲನೆ ದೊರಕಿತು. ಜೊತೆಗೆ, 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸನ್ಮಾನ, ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ ಸೇರಿದಂತೆ ಅನೇಕ ಸೇವಾ ಕಾರ್ಯಕ್ರಮಗಳು ನಡೆದವು.

ಈ ಸಂದರ್ಭದಲ್ಲಿ ಮಾಜಿ ಸಂಸದ ಜಿ.ಎಸ್. ಬಸವರಾಜ್, ಶಾಸಕ ಎಂ.ಟಿ. ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕರು ಪಿ.ಆರ್. ಸುಧಾಕರ್ ಲಾಲ್ ಹಾಗೂ ಎಂ.ಡಿ. ಲಕ್ಷ್ಮೀನಾರಾಯಣ್, ವೈ.ಎಚ್. ಹುಚ್ಚಯ್ಯ, ದಿಶಾ ಸಮಿತಿಯ ಸದಸ್ಯರು, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *