ಬಳ್ಳಾರಿ ಗಲಾಟೆ ಪ್ರಕರಣ: ತನಿಖೆ ನಡೆಸಿ ವರದಿ ನೀಡಲು ಸೂಚನೆ – ಸಿಎಂ ಸಿದ್ದರಾಮಯ್ಯ

0
Police-Crime-Arreat-1-300x170 (1)

ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿರುವುದು ದುಃಖಕರ ಸಂಗತಿ ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ಕೂಡ ಪರಿಶೀಲನೆ ನಡೆಸುವಂತೆ ಆದೇಶಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಸತೀಶ್ ರೆಡ್ಡಿ ಅವರು ಗಾಳಿಯಲ್ಲಿ ಗುಂಡು ಹಾರಿಸಲು ಯತ್ನಿಸಿದ ವೇಳೆ ಆ ಗುಂಡು ರಾಜಶೇಖರ್ ಅವರಿಗೆ ತಗುಲಿರುವ ಸಾಧ್ಯತೆ ಇದೆ ಎಂಬ ಮಾಹಿತಿ ಇದ್ದು, ಈ ಎಲ್ಲಾ ಅಂಶಗಳ ಕುರಿತು ತನಿಖೆಯ ಮೂಲಕ ಸ್ಪಷ್ಟತೆ ತರಬೇಕಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕಾನೂನು ಪ್ರಕ್ರಿಯೆಯ ಮೂಲಕ ಸತ್ಯಾಂಶ ಹೊರಬರಲಿದ್ದು, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

Leave a Reply

Your email address will not be published. Required fields are marked *

You may have missed