ಸಾಲದ ಒತ್ತಡಕ್ಕೆ ದಾರುಣ ಅಂತ್ಯ: ಒಂದೇ ಕುಟುಂಬದ ಇಬ್ಬರು ಸಾವು

0
police hoysala crime

ಬೆಂಗಳೂರು: ಸಾಲಗಾರರ ಕಾಟದಿಂದ ಬೇಸತ್ತ ಯುವಕನೊಬ್ಬ ತೀವ್ರ ಕ್ರಮಕ್ಕೆ ಮುಂದಾಗಿ, ಒಂದೇ ಕುಟುಂಬದ ಇಬ್ಬರು ಸಾವಿಗೀಡಾದ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ.

ಮೋಹನ್ ಗೌಡ ಆತ್ಮಹತ್ಯೆ ಮಾಡುವುದಾಗಿ ವಿಡಿಯೋ ದಾಖಲಿಸಿದ್ದಾನೆ. ಈ ವಿಡಿಯೋ ನೋಡಿ ಆತಂಕಗೊಂಡ ಸಂಬಂಧಿಕರು ಮನೆಗೆ ಧಾವಿಸಿದಾಗ ಹೃದಯವಿದ್ರಾವಕ ದೃಶ್ಯ ಎದುರಾಗಿದೆ.

ಮೋಹನ್ ತನ್ನ ತಾಯಿ ಹಾಗೂ ಅಕ್ಕನ ಮೇಲೆ ದಾಳಿ ನಡೆಸಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ತಾಯಿ ಆಶಾ (55) ಮತ್ತು ಅಕ್ಕ ವರ್ಷಿತಾ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಮೋಹನ್ ಗೌಡ (27) ಮತ್ತು ಅಕ್ಕನ ಮಗ ಮಯಾಂಕ್ (11) ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಪ್ರಾಥಮಿಕ ತನಿಖೆಯಲ್ಲಿ ಅತಿಯಾದ ಸಾಲದ ಒತ್ತಡವೇ ಈ ದುರ್ಘಟನೆಗೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *