ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

0
Iran-war-US-Army-Hormuz-750x461-1-300x184-2

ನವದೆಹಲಿ: ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಹಡಗುಗಳ ಮೇಲಿನ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಈ ದಾಳಿಯಲ್ಲಿ 30 ಭಾರತೀಯ ನಾವಿಕರ ಪೈಕಿ ಒಬ್ಬರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ.

ಎಂಟಿ ಅಲ್ ಬಹಿಯಾ ಹಡಗಿನಲ್ಲಿ 12 ಭಾರತೀಯರು ಇದ್ದು, ಅವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದಾರೆ. ಎಂಟಿ ಮೊಂಬಾಸಾ ಹಡಗಿನಲ್ಲಿ ಇದ್ದ 18 ಭಾರತೀಯರಲ್ಲಿ 9 ಮಂದಿ ಗಾಯಗೊಂಡಿದ್ದಾರೆ.

ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಭಾರತ, ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುತ್ತಿದೆ.

ಈ ದಾಳಿಗೆ ಸಂಬಂಧಿಸಿ ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯ ಉಪ ಮುಖ್ಯಸ್ಥರನ್ನು ವಿದೇಶಾಂಗ ಸಚಿವಾಲಯ ಕರೆಸಿ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ. ಹಾರ್ಮುಜ್ ಜಲಸಂಧಿಯಂತಹ ಅಂತರರಾಷ್ಟ್ರೀಯ ಜಲಮಾರ್ಗಗಳಲ್ಲಿ ಮುಕ್ತ ಹಾಗೂ ಸುರಕ್ಷಿತ ಸಂಚಾರಕ್ಕೆ ಅಡ್ಡಿಯಾಗುವ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ವಾಣಿಜ್ಯ ಹಡಗುಗಳು ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದೆ.

Leave a Reply

Your email address will not be published. Required fields are marked *