ಉತ್ತರ ಜಪಾನ್‌ನಲ್ಲಿ 5.8 ತೀವ್ರತೆಯ ಭೂಕಂಪ; ಜನರಲ್ಲಿ ಆತಂಕ

0
Earthquake-750x461-1-300x184-1

ಟೋಕಿಯೊ: ಉತ್ತರ ಜಪಾನ್‌ನ ಅಮೋರಿ ಪ್ರಾಂತ್ಯದಲ್ಲಿ ಶನಿವಾರ ಬೆಳಿಗ್ಗೆ 5.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ (JMA) ತಿಳಿಸಿದೆ.

ಸ್ಥಳೀಯ ಸಮಯ ಬೆಳಿಗ್ಗೆ 11:48ಕ್ಕೆ ಅಮೋರಿ ಪೆಸಿಫಿಕ್ ಕರಾವಳಿಯಿಂದ ಸುಮಾರು 80 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಜಪಾನ್‌ನ ಭೂಕಂಪನ ತೀವ್ರತಾ ಮಾಪಕದಲ್ಲಿ 7ರಲ್ಲಿ 4ರಷ್ಟು ಕಂಪನ ದಾಖಲಾಗಿದೆ. ಭೂಕಂಪದ ಕೇಂದ್ರಬಿಂದು 41.3 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 142.0 ಡಿಗ್ರಿ ಪೂರ್ವ ರೇಖಾಂಶದಲ್ಲಿತ್ತು.

ಈ ಭೂಕಂಪದ ಬಳಿಕ ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ. ಸದ್ಯಕ್ಕೆ ಜೀವಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಇದಕ್ಕೂ ಮುನ್ನ ಮಂಗಳವಾರ ಕುಮಾಮೊಟೊ ಪ್ರಾಂತ್ಯದಲ್ಲಿ ಸಂಭವಿಸಿದ್ದ ಪ್ರಬಲ ಭೂಕಂಪದಿಂದ ಭಾರೀ ಹಾನಿಯಾಗಿದ್ದು, ಸಾವಿನ ಸಂಖ್ಯೆ 35ಕ್ಕೆ ಏರಿದೆ. ಹಲವು ರಸ್ತೆಗಳು ಬಿರುಕು ಬಿಟ್ಟಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಪೆಟ್ರೋಲ್ ಬಂಕ್‌ಗಳ ಮುಂದೆ ಉದ್ದ ಸಾಲುಗಳು ಕಂಡುಬಂದಿದ್ದು, ಅನೇಕರು ವಾಹನಗಳಲ್ಲೇ ರಾತ್ರಿ ಕಳೆದಿದ್ದಾರೆ.

ಉಕಿ ನಗರದ ತಾತ್ಕಾಲಿಕ ಪರಿಹಾರ ಕೇಂದ್ರದಲ್ಲಿ ನೂರಾರು ಮಂದಿ, ವಿಶೇಷವಾಗಿ ವೃದ್ಧರು ಮತ್ತು ಮಕ್ಕಳು ಆಶ್ರಯ ಪಡೆದಿದ್ದು, ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ.

Leave a Reply

Your email address will not be published. Required fields are marked *