ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಮಳೆ

0
rain3-1

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕರಾವಳಿ ಕರ್ನಾಟಕ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 24ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗದಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆಯಾಗಬಹುದು.

ತುಮಕೂರು ಹಾಗೂ ಮಂಡ್ಯದಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲೂ ಮಳೆಯ ಸಾಧ್ಯತೆಯಿದೆ.

ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ರಾಯಚೂರು ಮತ್ತು ಕಲಬುರಗಿಯಲ್ಲಿ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣದಿಂದ ಮಧ್ಯಮ ಮಳೆಯಾಗಬಹುದು. ಹಾವೇರಿ, ಕೊಪ್ಪಳ, ಬೆಳಗಾವಿ, ಬೀದರ್ ಹಾಗೂ ಯಾದಗಿರಿಯಲ್ಲೂ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.

ಆ.25ರಂದು ಕರಾವಳಿ, ಮಲೆನಾಡಿನಲ್ಲಿ ಮಳೆ ಮುಂದುವರಿಕೆ

ಆಗಸ್ಟ್ 25ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಮುಂದುವರಿಯಲಿದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *