ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ ರೆಡ್ಡಿ ಮತ್ತೆ ಬಂಧಿಸಿದ ಎಸ್‍ಐಟಿ

0
janardhana reddy

ಬೆಂಗಳೂರು: ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಎಸ್‍ಐಟಿ ಅಧಿಕಾರಿಗಳು ಮತ್ತೆ ಬಂಧಿಸಿದ್ದಾರೆ. ಅಕ್ರಮ ಗಣಿಗಾರಿಕೆ ಸಂಬಂಧಿಸಿದ 13 ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‍ನಿಂದ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ಇದೀಗ ಮತ್ತೊಂದು ಹೊಸ ಪ್ರಕರಣದಲ್ಲಿ ರೆಡ್ಡಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ರೆಡ್ಡಿ ಅವರಿಗೆ ವಿಚಾರಣೆ ಹಾಜರಾಗುವಂತೆ ಎಸ್‍ಐಟಿ ನೋಟಿಸ್ ನೀಡಿತ್ತು. ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಎಸ್‍ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದ ರೆಡ್ಡಿ ಅವರನ್ನು ಎಸ್‍ಐಟಿ ಅಧಿಕಾರಿಗಳು ಮತ್ತೆ ಬಂಧಿಸಿದರು. ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ನ.23ರವರೆಗೆ ಎಸ್ಐಟಿ ವಶಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ.

Leave a Reply

Your email address will not be published. Required fields are marked *