ಮಂಗಳೂರು ಜೈಲು ಜಾಮ್ಮರ್‌ನಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಕ್ರಮ

0
Mangalore-city

ಮಂಗಳೂರು: ಜಿಲ್ಲಾ ಕಾರಾಗೃಹದ ಮೊಬೈಲ್ ಸಿಗ್ನಲ್ ಜಾಮ್ಮರ್‌ಗಳಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸೇವೆಗೆ ಅಡಚಣೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಸಮಸ್ಯೆ ಪರಿಹಾರಕ್ಕೆ ತಾಂತ್ರಿಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ಅವರು, ಕಾರಾಗೃಹದ ಜಾಮ್ಮರ್ ಕಾರ್ಯಾಚರಣೆಯಿಂದ ಸುತ್ತಮುತ್ತಲ ಪ್ರದೇಶಗಳ ನಾಗರಿಕರಿಗೆ ಮೊಬೈಲ್ ಸಂಪರ್ಕದಲ್ಲಿ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಜಂಟಿ ತಾಂತ್ರಿಕ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆಯ ಆಧಾರದ ಮೇಲೆ ಸಂಬಂಧಪಟ್ಟ ಸಂಸ್ಥೆಯು ಆಂಟೆನಾ ವಿನ್ಯಾಸ ಮತ್ತು ಜಾಮ್ಮರ್‌ನ ಸಾಮರ್ಥ್ಯವನ್ನು ಸೂಕ್ತವಾಗಿ ಹೊಂದಿಸುವ (ಆಪ್ಟಿಮೈಸೇಶನ್) ಕಾರ್ಯ ಕೈಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ.

ಕಾರಾಗೃಹದೊಳಗಿನ ಭದ್ರತಾ ಉದ್ದೇಶಕ್ಕೆ ಜಾಮ್ಮರ್‌ಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದರ ಜತೆಗೆ, ಹೊರಭಾಗದಲ್ಲಿ ಮೊಬೈಲ್ ಸಂಪರ್ಕಕ್ಕೆ ಉಂಟಾಗುವ ಅನಗತ್ಯ ಅಡಚಣೆಯನ್ನು ಕನಿಷ್ಠಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ.

ಇದಕ್ಕಾಗಿ ಟೆಲಿಕಾಂ ಸೇವಾ ಪೂರೈಕೆದಾರರ ಸಹಯೋಗದೊಂದಿಗೆ ಇನ್ನಷ್ಟು ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಕ್ರಮ ಮುಂದುವರಿದಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed