ಅಸ್ಸಾಂ ಬಸ್ ದುರಂತ; ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

0
Ambulance

ಗೋಲಾಘಾಟ್: ಅಸ್ಸಾಂನ ಗೋಲಾಘಾಟ್ ಜಿಲ್ಲೆಯ ಕಾಜಿರಂಗ ಸಮೀಪ ಮಿನಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 23 ಮಂದಿ ಮೃತಪಟ್ಟಿದ್ದಾರೆ. ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ ₹50 ಸಾವಿರ ನೆರವು ಘೋಷಿಸಲಾಗಿದೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಹಾರೈಸಿದ್ದಾರೆ.

Leave a Reply

Your email address will not be published. Required fields are marked *