ಕರ್ನಾಟಕದ ಜಲಸಂಕಷ್ಟ ಪರಿಹಾರಕ್ಕೆ ಪ್ರಧಾನಿಗೆ ದೇವೇಗೌಡರ ಪತ್ರ: ಐದು ಪ್ರಮುಖ ಬೇಡಿಕೆಗಳ ಪ್ರಸ್ತಾಪ

0
Modi-meet-hD-Devegowda

ನವದೆಹಲಿ: ಕರ್ನಾಟಕದಲ್ಲಿ ಕುಡಿಯುವ ನೀರು ಮತ್ತು ಕಾವೇರಿ ಜಲಾನಯನ ಪ್ರದೇಶ ಸೇರಿದಂತೆ ಎದುರಾಗಿರುವ ಜಲಸಂಕಷ್ಟದ ಕುರಿತು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.

ಬರ ಪರಿಸ್ಥಿತಿಯಲ್ಲಿ ತಮಿಳುನಾಡಿನ ನೀರಾವರಿಗಿಂತ ಬೆಂಗಳೂರಿನ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ರಾಜ್ಯದ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುವುದನ್ನು ತಡೆಯಬೇಕು ಹಾಗೂ 50 ವರ್ಷಗಳ ಹಳೆಯ ದತ್ತಾಂಶ ಆಧರಿಸಿದ ಕಾವೇರಿ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮೇಕೆದಾಟು ಯೋಜನೆಗೆ ಕೂಡಲೇ ಕೇಂದ್ರ ಜಲ ಆಯೋಗ (CWC) ಒಪ್ಪಿಗೆ ನೀಡಬೇಕು. ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಕರ್ನಾಟಕಕ್ಕೆ ನ್ಯಾಯಯುತ ಪಾಲು ಹೆಚ್ಚಿಸಬೇಕು ಎಂದೂ ಆಗ್ರಹಿಸಿದ್ದಾರೆ.

147 ಟಿಎಂಸಿ ನೀರಿನಲ್ಲಿ ಕರ್ನಾಟಕಕ್ಕೆ ಕೇವಲ 15.9 ಟಿಎಂಸಿ ಹಂಚಿಕೆ ಮಾಡಿರುವುದು ಅನ್ಯಾಯ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ದೇವೇಗೌಡರು, ರಾಜ್ಯದ ರೈತರು ಮತ್ತು ಜನಸಾಮಾನ್ಯರಿಗೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *