ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರು ಸಾವು!

0
Accident-300x195-1-1

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಇಂಡುವಾಳು ಗ್ರಾಮದ ಬಳಿ ಜಲ್ಲಿ ತುಂಬಿದ್ದ ಟಿಪ್ಪರ್‌ಗೆ ಹಿಂದಿನಿಂದ ಥಾರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬನನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನ ದಟ್ಟಣೆ ಉಂಟಾಗಿತ್ತು. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed