ಸಿಇಟಿ ವೇಳೆ ವಿದ್ಯಾರ್ಥಿಯ ಜನಿವಾರ ಬಿಚ್ಚಿಸಿದವರ ವಿರುದ್ಧ ಸೂಕ್ತ ಕ್ರಮ; ಮಧು ಬಂಗಾರಪ್ಪ

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಇದೇ ವೇಳೆ, ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಮಧು ಬಂಗಾರಪ್ಪ, ಮಾಧ್ಯಮಗಳ ಮೂಲಕ ವಿಚಾರ ತಿಳಿದುಕೊಂಡಿದ್ದೇವೆ.ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸುವಂತೆ ನಿರ್ದೇಶನ ಕೊಡುವ ಅಧಿಕಾರ ಯಾರಿಗೂ ಇಲ್ಲ. ಅದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ ಎಂದಿದ್ದಾರೆ. ಈ ಘಟನೆ ತಮ್ಮ ಜಿಲ್ಲೆಯಲ್ಲಿ ನಡೆದಿರುವುದರಿಂದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ.