‘ಹಂದಿಗಳೊಂದಿಗೆ ಎಂದೂ ಜಗಳಕ್ಕೆ ಇಳಿಯಬೇಡಿ..’ ಎಂದು ಪೊಲೀಸರಿಗೆ ಕರೆ ಕೊಟ್ಟ ಎಡಿಜಿಪಿ; ಕೇಂದ್ರ ಸಚಿವ ಹೆಚ್ಡಿಕೆಗೆ ಹೀಗೊಂದು ಟಾಂಗ್ ಕೊಟ್ಟ IPS ಅಧಿಕಾರಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುವ ಅಬ್ಬರದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಬಗ್ಗೆಯೂ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.

ಎಸ್​ಐಟಿ ಎಡಿಜಿಪಿ ಚಂದ್ರಶೇಖರ್ ಅವರ ಭ್ರಷ್ಟಾಚಾರ ಆರೋಪ ಬಗ್ಗೆ ಪ್ರಕರಣ ದಾಖಲಾಗಿರುವ ಬಗ್ಗೆ ಪ್ರಸ್ತಾಪಿಸಿರುವ ಹೆಚ್ಡಿಕೆ, ಇಡಿ ತನಿಖೆ ಬಗ್ಗೆಯೂ ಪ್ರತಿಪಾದಿಸಿದ್ದಾರೆ.

ಕುಮಾರಸ್ವಾಮಿ ಹೇಳಿಕೆಗಳಿಗೆ ಖಾರವಾಗಿ ಪ್ರತಿಕ್ರಿಯಿಸಿರುವ ಎಡಿಜಿಪಿ ಚಂದ್ರಶೇಖರ್, ‘ಹಂದಿಗಳ ಜೊತೆಗೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೀವಿ’ ಎಂದಿದ್ದಾರೆ.

ತಮ್ಮ ಸಹೋದ್ಯೋಗಿ ಪೊಲೀಸರಿಗೆ ಬಹಿರಂಗ ಪತ್ರ ಬರೆದು ಧೈರ್ಯ ತುಂಬಿರುವ ಎಡಿಜಿಪಿ ಚಂದ್ರಶೇಖರ್, ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ಆರೋಪದ ಜೊತೆಗೆ ಬೆದರಿಕೆ ಹಾಕಿದ್ದಾರೆ ಎಂದಿದ್ದಾರೆ ಎಂದಿದ್ದಾರೆ.

ಹೆಚ್‌.ಡಿ.ಕುಮಾರಸ್ವಾಮಿ ಜಾಮೀನಿನ ಮೇಲಿರುವ ಆರೋಪಿ. ಅವರಿಂದ ನಮ್ಮನ್ನು ಕುಗ್ಗಿಸುವ ಪ್ರಯತ್ನ ನಡೆದಿದೆ. ನಮ್ಮಲ್ಲಿ ಭಯ ಹುಟ್ಟಿಸುವ ಉದ್ದೇಶ ಅವರದ್ದು. ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಅವರೊಬ್ನ ಆರೋಪಿಯಾಗಿದ್ದಾರೆ. ಹಾಗಾಗಿ ಅವರ ಆರೋಪ ಮತ್ತು ಬೆದರಿಕೆಗಳಿಗೆ ನಾವು ಜಗ್ಗಬಾರದು ಎಂದು ಪ್ರತಿಪಾದಿಸಿದ್ದಾರೆ.

ಎಸ್‌ಐಟಿ ಮುಖ್ಯಸ್ಥನಾಗಿ ನಾನು ಭಯವಿಲ್ಲದೆ ಕೆಲಸ ಮಾಡಿ, ಪ್ರಕರಣದ ಸತ್ಯಾಸತ್ಯತೆ ಹೊರಗೆ ತರುತ್ತೇನೆ ಎಂದಿರುವ ಎಡಿಜಿಪಿ, ಎಲ್ಲಾ ಬಾಹ್ಯ ಪ್ರಭಾವದಿಂದ ನಿಮ್ಮನ್ನೂ ರಕ್ಷಿಸುತ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ.

ಇದೇ ವೇಳೆ, ಈ ಪತ್ರದಲ್ಲಿ ಜಾರ್ಜ್ ಬರ್ನಾರ್ಡ್ ಶಾ ಅವರ ಪ್ರಸಿದ್ಧ ವಾಕ್ಯವನ್ನು ನೆನಪಿಸಿರುವ ಚಂದ್ರಶೇಖರ್, ‘ಹಂದಿಗಳೊಂದಿಗೆ ಎಂದೂ ಜಗಳಕ್ಕೆ ಇಳಿಯಬೇಡಿ. ಹಂದಿಗಳ ಜೊತೆಗೆ ಜಗಳಕ್ಕೆ ಇಳಿದರೆ ನಾವೂ ಕೊಳಕಾಗುತ್ತೇವೆ’ ಎಂದಿದ್ದಾರೆ. ‘ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತದೆ’ ಎಂದು ಬರೆದುಕೊಂಡಿರುವ ಚಂದ್ರಶೇಖರ್, ನಾವು ನಮ್ಮ ಕರ್ತವ್ಯವನ್ನು ನಿರ್ವಹಿಸುದರಲ್ಲಿ ಹಿಂದೇಟು ಹಾಕಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

You may have missed