ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

0
Modi-meet-Advani-2026-1

ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (98) ಅವರು ಉಸಿರಾಟದ ಸಮಸ್ಯೆಯಿಂದ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶುಕ್ರವಾರ ಸಂಜೆ ಸುಮಾರು 7.30ಕ್ಕೆ ಅವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಶ್ವಾಸಕೋಶ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದ್ದು, ಸದ್ಯಕ್ಕೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಅಡ್ವಾಣಿ ಅವರಿಗೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಉಸಿರಾಟದ ತೊಂದರೆಯ ಜತೆಗೆ ಎದೆ ಸೋಂಕಿನ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದೂ ವರದಿಯಾಗಿದೆ.

ಇದಕ್ಕೂ ಮೊದಲು ಈ ವರ್ಷದ ಮೇ ತಿಂಗಳಲ್ಲಿಯೂ ಅಡ್ವಾಣಿ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವು ದಿನಗಳ ಚಿಕಿತ್ಸೆಯ ಬಳಿಕ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಪ್ರಸ್ತುತ ಅವರು ವೈದ್ಯಕೀಯ ನಿಗಾದಲ್ಲಿದ್ದು, ಅವರ ಆರೋಗ್ಯದ ಕುರಿತು ವೈದ್ಯರು ಗಮನ ಹರಿಸುತ್ತಿದ್ದಾರೆ.

Leave a Reply

Your email address will not be published. Required fields are marked *