Anna-Bhagya-Ration-Rice-300x156

ಬೆಂಗಳೂರು: ರಾಜ್ಯಸರ್ಕಾರ ಇನ್ನುಮುಂದೆ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ.

ಈ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂಪಾಯಿ ಹಣ ನೀಡಲಾಗುತ್ತಿತ್ತು. ಇನ್ನು ಮುಂದೆ 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಈ ತಿಂಗಳಿಂದಲೇ ಅಕ್ಕಿಯನ್ನು ನೀಡಲಾಗುತ್ತದೆ ಎಂದವರು ತಿಳಿಸಿದರು. ಕೇಂದ್ರ ಸರ್ಕಾರವು 5 ಕೆಜಿ ಅಕ್ಕಿನೀಡಲು ಒಪ್ಪಿದೆ ಎಂದ ಅವರು, ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ. ರಾಜ್ಯದ ಪರಿಸ್ಥಿತಿ ಬಗ್ಗೆ ಕೇಂದ್ರಕ್ಕೆ ವಿವರಿಸಲಾಗಿದ್ದು, ನಮ್ಮ ಮನವಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸ್ಪಂದಿಸಿದ್ದಾರೆ ಎಂದು ಸಚಿವ ಮುನಿಯಪ್ಪ ಹೇಳಿದರು.

Leave a Reply

Your email address will not be published. Required fields are marked *

You may have missed