ಮತ್ತೊಬ್ಬ ಹಿಂದೂ ಕಾರ್ಯಕರ್ತನ ಕಗ್ಗೊಲೆ: ಮಂಗಳೂರಿನಲ್ಲಿ ಪರಿಸ್ಥಿತಿ ಪ್ರಕ್ಷುಬ್ಧ

0

ಮಂಗಳೂರು: ಬಂದರು ನಗರಿ ಮಂಗಳೂರಿನಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆ ನಡೆದಿದ್ದು, ಕರಾವಳಿ ಜಿಲ್ಲೆ ಬೆಚ್ಚಿ ಬಿದ್ದಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಇದೀಗ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಕೊಲೆ ನಡೆದಿದೆ.

ಸುರತ್ಕಲ್‌ನಲ್ಲಿ 2022 ರಲ್ಲಿ ನಡೆಡಿದ್ದ ಫಾಜಿಲ್ ಕೊಲೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದರು. ಬಜರಂಗದಳದ ಕಾರ್ಯಕರ್ತರಾಗಿದ್ದ ಸುಹಾಸ್ ಶೆಟ್ಟಿ, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು ಎಂದು ವಿಶ್ವಹಿಂದೂ ಪರಿಷತ್ ಮುಖಂಡರು ತಿಳಿಸಿದ್ದಾರೆ. ಮತ್ತು ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು.

ಸುಹಾಸ್ ಶೆಟ್ಟಿ ಹತ್ಯೆ ನಂತರ ಮಂಗಳೂರು ಸುತ್ತಮುತ್ತ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *