ಬೆಸ್ಕಾಂ ಅವಾಂತರ; ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು

police -hoysala-1

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ರಾಜಧಾನಿ ಹೊರವಲಯದ ಚಿಕ್ಕನಹಳ್ಳಿ ಗ್ರಾಮದಲ್ಲಿ ಬೆಳಗ್ಗೆ ಮಹಿಳೆಯರು ನಿಂತಿದ್ದ ಸ್ಥಳದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಅವಘಡ ಸಂಭವಿಸಿದೆ.

ಮೃತ ಮಹಿಳೆಯನ್ನು ಮಂಜಮ್ಮ ಎಂದು ಗುರುತಿಸಲಾಗಿದೆ. ಮೃತರ ಸಂಬಂಧಿಯ ದೂರು ಆಧರಿಸಿ ತಾವರೆಕೆರೆ ಠಾಣೆ ಪೊಲೀಸರು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.

You may have missed