ಲಂಚ ಪುರಾಣ; ಬಂಧನ ಭೀತಿಯಿಂದ ಪಾರಾದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ
ಬೆಂಗಳೂರು: ಕೆಎಸ್‌ಡಿಎಲ್ ಲಂಚ ಪುರಾಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಬಿಜೆಪಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ರಾಜ್ಯ ಹೈಕೋರ್ಟ್ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಇಂದು ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಕೆಎಸ್‌ಡಿಎಲ್ ಟೆಂಡರ್ ಗೋಲ್‌ಮಾಲ್ ಅವಾಂತರದಲ್ಲಿ ನಿಗಮದ ಅಧ್ಯಕ್ಷರೂ ಆದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಅವರು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದರು. ಅನಂತರ ನಡೆದ ದಾಳಿಯ ಸಂದರ್ಭದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಅವರ ನಿವಾಸ ಸಹಿತ ಹಲವೆಡೆ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿರುವ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಅವರಿಗಾಗಿ ಹುಡುಕಾಟ ನಡೆಸಿದೆ. ಅದಾಗಲೇ ಹೈಕೋರ್ಟ್ ಮೆಟ್ಟಿಲೇರಿರುವ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕೋರ್ಟ್ ಆದೇಶ ಪ್ರತಿ ಸಿಕ್ಕಿದ 48 ಗಂಟೆಯೊಳಗೆ ವಿಚಾರಣಾಧಿಕಾರಿ ಮುಂದೆ ಹಾಜರಾಗುವುದೂ ಸಹಿತ ಕೆಲವು ಪ್ರಮುಖ ಷರತ್ತಿನೊಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.