ಮುಂದಿನ ತಿಂಗಳು ನಿಗಮ ಮಂಡಳಿಗಳಿಗೆ ಹೊಸಬರ ನೇಮಕ ಸಾಧ್ಯತೆ; ನಾಯಕರಲ್ಲಿ ಹೆಚ್ಚಿದ ನಿರೀಕ್ಷೆ

0
kpcc-office-1

ಬೆಂಗಳೂರು: ಮುಂದಿನ ತಿಂಗಳು ನಿಗಮ ಮಂಡಳಿಗಳಿಗೆ ಹೊಸಬರನ್ನು ನೇಮಕ ಮಾಡಲಾಗುವುದು. ಈ ವೇಳೆ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮ ಮಂಡಳಿಗಳ ನೇಮಕಾತಿ ವೇಳೆ ಪಕ್ಷದ ನಾಯಕರ ಅಭಿಪ್ರಾಯಗಳನ್ನು ಆಧರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ವಿಧಾನ ಪರಿಷತ್ ಚುನಾವಣೆಯ ಸೋಲು ಕಾಂಗ್ರೆಸ್‌ಗೆ ಎಚ್ಚರಿಕೆಯ ಸಂದೇಶವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ದುರಾಡಳಿತ ಎಂದು ಒಪ್ಪಲು ಸಾಧ್ಯವಿಲ್ಲ. ಸರ್ಕಾರದಲ್ಲಿ ಸಣ್ಣಪುಟ್ಟ ವೈಫಲ್ಯಗಳಿರಬಹುದು. ಅವುಗಳನ್ನು ಗುರುತಿಸಿ ಸರಿಪಡಿಸಿಕೊಳ್ಳಲಾಗುವುದು ಎಂದು ಹೇಳಿದರು.

ಕಾರ್ಯಕರ್ತರನ್ನು ಕಡೆಗಣಿಸಿದ ಪರಿಣಾಮ ಸೋಲಾಗಿದೆ ಎಂಬ ಪ್ರಶ್ನೆಗೆ, ಕಾರ್ಯಕರ್ತರಿಗೆ ಸ್ವಲ್ಪ ನೋವಿದೆ. ಆದರೆ ಅಧಿಕಾರ ಮತ್ತು ಚುನಾವಣೆ ಬೇರೆ ಬೇರೆ ವಿಚಾರಗಳು. ಕಾರ್ಯಕರ್ತರು ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You may have missed