ವಯನಾಡು ಸಂತ್ರಸ್ತರಿಗಾಗಿ ಮಿಡಿದ ಕರುನಾಡು ಹೃದಯಗಳು.. BTM, ಜಯನಗರ ಕ್ಷೇತ್ರಗಳಿಂದ 9 ಟ್ರಕ್‌ಗಳಲ್ಲಿ ಅಹಾರ, ಅಗತ್ಯವಸ್ತು ರವಾನೆ..

ಬೆಂಗಳೂರು: ಕೇರಳದ ವಯನಾಡಿನಲ್ಲಿ, ಹಾಗೂ ಕರಾವಳಿಯ ಶಿರೂರಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದ‌ ಬಡಪಾಯಿಗಳ ಬಗ್ಗೆ ಬೆಂಗಳೂರಿನ ಬಿಟಿಎಂ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರಗಳ ಜನರು ಅನುಕಂಪ ತೋರಿದ್ದಾರೆ. ಬಿಟಿಎಂ ಮತ್ತು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ವಯನಾಡು ಮತ್ತು ಶಿರೂರು ಸಂಭವಿಸಿದ ಭೂಕುಸಿತದ ದುರಂತಕ್ಕೆ ಸ್ಪಂದಿಸಲು ಪರಿಹಾರ ಸಾಮಾಗ್ರಿಗಳನ್ನು ರವಾನಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು (ಮಂಗಳವಾರ) ಸಾರಿಗೆ ಮತ್ತು ಮುಜರಾಯಿ‌ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತಿಯಲ್ಲಿ, ಆಹಾರ, ಸಾಮಾಗ್ರಿಗಳನ್ನು ಹೊತ್ತ ಸುವಾರು 9 ಟ್ರಕ್ ಗಳಿಗೆ ಉಪಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಚಾಲನೆ ನೀಡಿದರು. ಸದರಿ ಟ್ರಕ್ ಗಳೊಂದಿಗೆ ಜಯನಗರದ ಮಾಜಿಬಶಾಸಕಿ ಸೌಮ್ಯ ರೆಡ್ಡಿ, ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಮಾಜಿ ಕಾರ್ಪೊರೇಟರ್ ನಾಗರಾಜು, ಮಂಜುನಾಥ್‌ ಅವರನ್ನೊಳಗೊಂಡ ನಾಯಕರ ತಂಡ ಈ ಸಾಮಾಗ್ರಿಗಳ ಜೊತೆ ತೆರಳಿದೆ.

ಕರ್ನಾಟಕದ ಶಿರೂರು ಮತ್ತು ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ, ಪ್ರವಾಹದ ದುರಂತಕ್ಕೆ ನೂರಾರು ಜನರು ತಮ್ಮ ಪ್ರಾಣಗಳನ್ನು ಕಳೆದುಕೊಂಡಿದ್ದು, ಅಪಾರ ಆಸ್ತಿಪಾಸ್ತಿ ನಷ್ಟವಾಗಿದೆ. ಮಾನವೀಯ ನೆಲೆಯಲ್ಲಿ ಸ್ಪಂದಿಸುವ ನಿಟ್ಟಿನಲ್ಲಿ 9 ಟ್ರಕ್ ಗಳಲ್ಲಿ ರೂ.1.32 ಕೋಟಿ ಮೊತ್ತದಷ್ಟು‌ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಲಾಗಿದೆ ಎಂದು ಸಚಿವರು ವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ಟ್ರಕ್ ನಲ್ಲಿ ಸೀರೆ, ಟಿ- ಶರ್ಟ್, ಟೂತ್ ಪೇಸ್ಟ್ / ಬ್ರಷ್, ಸೋಪು, ಬಿಸ್ಕತ್, ಅಕ್ಕಿ, ಬೇಳೆ ಕಾಳುಗಳು, ಸಾಂಬಾರ ಪದಾರ್ಥಗಳು, ಬಕೆಟ್, ಟಾರ್ಪಲಿನ್, ಟವೆಲ್, ಜಮಕಾನ, ಲೋಟ ತಟ್ಟೆಗಳು, ಎಣ್ಣೆ ಇತ್ಯಾದಿ ಅಗತ್ಯ ವಸ್ತುಗಳಿವೆ. ವಯನಾಡಿನ ಭೀಕರತೆ, ಸಾವು ನೋವು ನೋಡಲು ಸಾಧ್ಯವಿಲ್ಲ. ಅಗಲಿದ ಆತ್ಮಗಳಿಗೆ ಶಾಂತಿ ಕೋರುತ್ತಾ, ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಮನೆಯವರಿಗೆ ಆ ಭಗವಂತ ಕರುಣಿಸಲಿ. ಈ ಕಷ್ಟದ ಪರಿಸ್ಥಿತಿಯಲ್ಲಿ ಅವರಿಗೆ ನಮ್ಮ ಕೈಲಾದ ಸೇವೆ ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಸಚಿವರು ನುಡಿದಿದ್ದಾರೆ.

  • 2019ರಲ್ಲಿ ಕೊಡಗು ಕೇರಳ ಪ್ರವಾಹ ದುರಂತ ಸಂಭವಿಸಿದ ಸಂದರ್ಭದಲ್ಲೂ ಬಿ.ಟಿ.ಎಂ ಮತ್ತು ಜಯನಗರ ವಿಧಾನಸಭಾ‌ ಕ್ಷೇತ್ರಗಳಿಂದ 16 ಲಾರಿಗಳಲ್ಲಿ ರೂ.1 ಕೋಟಿ ವೆಚ್ಚದ ಪರಿಹಾರ ಸಾಮಾಗ್ರಿಗಳನ್ನು‌ ಕಳುಹಿಸಲಾಗಿತ್ತು.

  • 2020 ರಲ್ಲಿ ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ನೆರೆ ಪ್ರವಾಹದ ‌ದುರಂತದ ಸಮಯದಲ್ಲಿ ಸಹ 20 ಲಾರಿಗಳಲ್ಲಿ ರೂ. 1.25 ಕೋಟಿ ವೆಚ್ಚದ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಲಾಗಿತ್ತು.

  • ಕೋವಿಡ್‌ನ ಸಮಯದಲ್ಲಿ ಪ್ರತಿದಿನ ಒಂದನೆ ಅಲೆ‌ 50,000 ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ 35,000 ಜನರಿಗೆ ಉಚಿತವಾಗಿ ಊಟವನ್ನು ನೀಡಲಾಗಿತ್ತು ಅದರೊಂದಿಗೆ ಎರಡೂ ಅಲೆಗಳಲ್ಲಿ ಸುಮಾರು 120000 ಕಿಟ್ ಗಳನ್ನು ವಿತರಿಸಲಾಗಿತ್ತು. ಇದರೊಂದಿಗೆ ಹಾಲು, ಬ್ರೆಡ್, ಮೊಟ್ಟೆ ತರಕಾರಿಗಳನ್ನು ಉಚಿತವಾಗಿ ನೀಡಲಾಗಿತ್ತು.

ಇದೀಗ ಕೇರಳದ ವಯನಾಡ್ ಹಾಗೂ ಕರಾವಳಿಯ ಶರೂರು ಭೂಕುಸಿತ ಸಂತ್ರಸ್ತರಿಗೆ ಆಹಾರ ಹಾಗೂ ಅಗತ್ಯ ಸಾಮಾಗ್ರಿಗಳ ರವಾನಿಸಿದ ಸಂದರ್ಭದಲ್ಲಿ ಶಾಸಕ ಯು.ಬಿ.ವೆಂಕಟೇಶ್, ಕೆಪಿಸಸಿ ಖಜಾಂಚಿ.‌ಕೃಷ್ಣಂರಾಜು, ಮುಖಂಡರಾದ ಬಿ.ಮಲ್ಲಿಕಾರ್ಜುನ್, ಚಂದ್ರಪ್ಪ, ‌ಆನಂದ್, ಮಂಜುಳಾ ಸಂಪತ್, ಬಿ.ಮೋಹನ್, ಗೋವರ್ಧನ ರೆಡ್ಡಿ, ಮುನಿರಾಜು, ವೆಂಕಟಸ್ವಾಮಿ, ಚಂದ್ರಪ್ಪ‌‌ನಗರ. ಮಂಜು ಸಹಿತ ಅನೇಕರು ಉಪಸ್ಥಿತರಿದ್ದರು.

You may have missed