ಬಂಟರ ಸಂಘ ಬೆಂಗಳೂರು ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

0
Bunts-Sangh-Election-Result-2026

ಬೆಂಗಳೂರು: ವಿಜಯನಗರದ ಬಂಟರ ಸಂಘದಲ್ಲಿ ನಡೆದ 2026–29ನೇ ಸಾಲಿನ ಚುನಾವಣೆಯಲ್ಲಿ ದೀಪಕ್ ಶೆಟ್ಟಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಧುಕರ್ ಶೆಟ್ಟಿ ಉಪಾಧ್ಯಕ್ಷರಾಗಿ ಹಾಗೂ ಮಹಿಳಾ ಮೀಸಲು ಉಪಾಧ್ಯಕ್ಷರಾಗಿ ಸೌಮ್ಯ ಶ್ರೀ ಹೆಗಡೆ ಆಯ್ಕೆಯಾಗಿದ್ದಾರೆ.

ಚುನಾವಣೆಯ ಫಲಿತಾಂಶದಂತೆ ಅಮರನಾಥ್ ಶೆಟ್ಟಿ ಕಾರ್ಯದರ್ಶಿಯಾಗಿ, ಸುರೇಶಾ ಶೆಟ್ಟಿ ಜಂಟಿ ಕಾರ್ಯದರ್ಶಿಯಾಗಿ ಹಾಗೂ ರಮೀತ್ ಬಿ. ಶೆಟ್ಟಿ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರು:

ಆನಿತಾ ಚಂದ್ರಶೇಖರ್ ಶೆಟ್ಟಿ, ಶಕುಂತಲ ಶೆಟ್ಟಿ, ಮಾಲತಿ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಕಿಶೋರ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಕಿರ್ತನ್ ಶೆಟ್ಟಿ, ಸುರೇಂದ್ರ ಶೆಟ್ಟಿ, ಪ್ರಸಾದ ಕುಮಾರ್ ಶೆಟ್ಟಿ, ಡಿ.ಬಿ. ಪ್ರತಾಪ್ ಶೆಟ್ಟಿ, ರಾಮದಾಸ್ ಶೆಟ್ಟಿ, ಹೀರಾ ಅನೂಪ್ ಹೆಗಡೆ, ಉಮೇಶ್ ಹಾಗೂ ನಿತ್ಯಾರಂಜನ್ ಶೆಟ್ಟಿ ಅವರು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಶಿಕ್ಷಣ, ಉದ್ಯೋಗ, ಆರೋಗ್ಯಕ್ಕೆ ಆದ್ಯತೆ:

ನೂತನ ಅಧ್ಯಕ್ಷ ದೀಪಕ್ ಶೆಟ್ಟಿ ಮಾತನಾಡಿ, ಸಂಘದ ಸದಸ್ಯರು ತಮ್ಮ ಮೇಲೆ ಇಟ್ಟಿರುವ ನಿರೀಕ್ಷೆ ಹೆಚ್ಚಿದೆ. ಸಮುದಾಯ ಹಾಗೂ ಸಮಾಜದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ತಿಳಿಸಿದರು.

ಸಂಘದ ವತಿಯಿಂದ ಐದು ಅಂಶಗಳ ಅಭಿವೃದ್ಧಿ ಯೋಜನೆ ರೂಪಿಸಲಾಗಿದ್ದು, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ, ಉದ್ಯೋಗ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಈಗಾಗಲೇ ಸಾವಿರಾರು ಜನರನ್ನು ಭೇಟಿ ಮಾಡಿ ಅವರ ಸಲಹೆ ಹಾಗೂ ಮಾರ್ಗದರ್ಶನ ಪಡೆಯಲಾಗಿದೆ. ಸದಸ್ಯರ ಅಭಿಪ್ರಾಯಗಳನ್ನು ಆಧರಿಸಿ ಸಂಘದ ಮುಂದಿನ ಕಾರ್ಯಚಟುವಟಿಕೆಗಳನ್ನು ರೂಪಿಸಲಾಗುವುದು ಎಂದರು.

ರಾಜ್ಯ ಸರ್ಕಾರ ತುಳು ಭಾಷೆಗೆ ಎರಡನೇ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವುದಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಂಘದ ಪರವಾಗಿ ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *