ಬಿಜೆಪಿಯಲ್ಲೀಗ ರಾಜೀನಾಮೆ ಪರ್ವ; ಮತ್ತೊಬ್ಬ ಶಾಸಕ ಗುಡ್ ಬೈ

0
BJP Flag

ಬೆಂಗಳೂರು: ರಾಜ್ಯ ಬಿಜೆಪಿಯಲ್ಲೀಗ ರಾಜೀನಾಮೆ ಪರ್ವ ಆರಂಭವಾಗಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ನಾಯಕರು ರಾಜೀನಾಮೆ ನೀಡುವ ಪ್ರಕ್ರಿಯೆಯನ್ನು ಬಿರುಸುಗೊಳಿಸಿದ್ದಾರೆ.

ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವ ಆರ್.ಶಂಕರ್ ತಮ್ಮ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೂ ಗುಡ್ ಬೈ ಹೇಳಿದ್ದಾರೆ. ಅವರಷ್ಟೇ ಅಲ್ಲ, ಇನ್ನೂ ಕೆಲ ನಾಯಕರು ಬಿಜೆಪಿ ತ್ಯಜಿಸಿದ್ದಾರೆ. ಇದೀಗ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕೂಡಾ ಪಕ್ಷಕ್ಕೆ ರಾಜೀನಾನೆ ಸಲ್ಲಿಸಿದ್ದಾರೆ. ಬುಧವಾರ ಬಿಡುಗಡೆಯಾದ ಬಿಜೆಪಿ ಎರಡನೇ ಪಟ್ಟಿಯಲ್ಲಿ ಮೂಡಿಗೆರೆ ಮೀಸಲು ಕ್ಷೇತ್ರಕ್ಕೆ ಹಾಲಿ ಎಂ.ಪಿ.ಕುಮಾರಸ್ವಾಮಿ ಅವರನ್ನು ಕೈಬಿಟ್ಟು ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ಘೊಷಿಸಲಾಗಿದೆ. ಇದರಿಂದ ಮುನಿಸಿಕೊಂಡಿರುವ ಶಾಸಕ ಎಂ‌ಪಿ.ಕುಮಾರಸ್ವಾಮಿ ಅವರು ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಅವರ ಆಪ್ತ‌ ಮೂಲಗಳು ತಿಳಿಸಿವೆ.

ಇದೇ ವೇಳೆ, ಹಾವೇರಿಯಲ್ಲಿನ ಬಿಜೆಪಿ ಹಿರಿಯ ನಾಯಕ ನೆಹರೂ ಓಲೇಕಾರ್ ಕೂಡಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇನ್ನೊಂದೆಡೆ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕೂಡಾ ಬಿಜೆಪಿ ತ್ಯಜಿಸಲು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *