ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ; ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆದಿದ್ದು ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳೂ ಭರ್ತಿಯಾಗಿದ್ದು ಹೊರ ಹರಿವು ಕೂಡಾ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನರಿಗೆ ಎಚ್ಚರವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ.

ತುಂಗಭದ್ರಾ ಜಲಾಶಯದ ಒಂದು ಕ್ರೆಸ್ಟ್ ಗೇಟ್ ಹಾನಿಗೊಳಗಾಗಿದ್ದು ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರ ಹರಿ ಬಿಡಲಾಗಿದೆ. ಇದರಿಂದಾಗಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಇನ್ನೊಂದೆಡೆ, ಕಾವೇರಿ ನದಿ ಕೂಡ ಅಪಾಯದ ಮಟ್ಟ ಮೀರಿ ಹರಿಯತ್ತಿದೆ. ಹಾಗಾಗಿ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಭಾಗದ ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.

You may have missed