ಕಾವೇರಿ ವಿಚಾರದಲ್ಲಿ ಯಾವುದೇ ಒತ್ತಡಕ್ಕೂ ಮಣಿಯದಿರಿ, ನುಡಿದಂತೆ ನಡೆಯಿರಿ; ಕುರುಬೂರು ಆಗ್ರಹ

kuruburu shanthakumar

ಮೈಸೂರು: ಕಾವೇರಿ ನದಿ ನೀರು ವಿಚಾರದಲ್ಲಿ ಯಾವ ಒತ್ತಡಕ್ಕೂ ಮಣಿಯದೆ ನುಡಿದಂತೆ ನಡೆಯಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.‌

ಈ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಧಿಕ್ಕರಿಸಬೇಕು, ಯಾವುದೇ ಕಾರಣಕ್ಕೂ ನೀರು ಬಿಡುವ ನಿರ್ಧಾರ ಮಾಡಬಾರದು ಬೆಂಗಳೂರು, ಮೈಸೂರು, ನಗರದ ಜನ ಕುಡಿಯುವ ನೀರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡು ನಿಮ್ಮ ಕ್ಷೇತ್ರದ ಶಾಸಕರ ಗಮನ ಸೆಳೆಯುವ ಹೋರಾಟ ನಡೆಸಬೇಕು ಎಂದಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ನೀರು ಬಿಡುವುದಿಲ್ಲ ಎನ್ನುವ ತೀರ್ಮಾನ ಕೈಗೊಂಡಿದೆ ನುಡಿದಂತೆ ನಡೆದುಕೊಳ್ಳಬೇಕು ಇಂದಿನ ಪರಿಸ್ಥಿತಿಯಲ್ಲಿ ಜಲಾಶಯಗಳು ಖಾಲಿಯಾಗಿದೆ, ನೀರು ಬಿಡುವುದಿಲ್ಲ ಎನ್ನುವ ಬದ್ಧತೆಯನ್ನು ತೋರಬೇಕು ಆದೇಶ ಧಿಕ್ಕರಿಸಬೇಕು ರಾಜ್ಯದ ಜನರ ಹಿತ ರಕ್ಷಣೆಗಾಗಿ ಸರ್ಕಾರ ಕೆಲಸ ಮಾಡಬೇಕು ಈಗಾಗಲೇ ಕಾವೇರಿ ಅಚ್ಚುಕಟ್ಟು ಭಾಗದ ರೈತರ ಬಲಿಕೊಟ್ಟಾಗಿದೆ ಮುಂದುವರಿದು ನಗರ ಪ್ರದೇಶಗಳ ಜನರಿಗೆ ಕುಡಿಯುವ ನೀರಿನ ಒದಗಿಸಲು ಸಾಧ್ಯವಾಗದೆ ಅವರನ್ನು ಬಲಿ ಕೊಡುವ ಸ್ಥಿತಿ ನಿರ್ಮಾಣ ಮಾಡಬಾರದು ಎನ್ನುವುದನ್ನು ಮರೆಯಬಾರದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

You may have missed