ಲೋಕಸಭೆಯಲ್ಲಿ ಕೃತಕವಾಗಿ ಮೂರನೇ ಎರಡರಷ್ಟು ಬಹುಮತ ಸೃಷ್ಟಿಸಲು ಮೋದಿ ಸರ್ಕಾರ ಯತ್ನ: ಕಾಂಗ್ರೆಸ್ ಆರೋಪ!

0
Jairam-Ramesh

ನವದೆಹಲಿ: ಲೋಕಸಭೆಯಲ್ಲಿ ಕೃತಕವಾಗಿ ಮೂರನೇ ಎರಡರಷ್ಟು ಬಹುಮತ ಸೃಷ್ಟಿಸಲು ಕೇಂದ್ರದ ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ. ಈ ನಡೆಯನ್ನು ಸಂವಿಧಾನದ ಮೇಲಿನ ದಾಳಿ ಎಂದು ಅವರು ಟೀಕಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಮೇಶ್, ಉತ್ಪಾದನಾ ವಲಯವನ್ನು ಬಲಪಡಿಸುವಲ್ಲಿ ವಿಫಲವಾಗಿರುವ ಸರ್ಕಾರ ಈಗ ಲೋಕಸಭೆಯಲ್ಲಿ ಬಹುಮತವನ್ನು ಕೃತಕವಾಗಿ ಸೃಷ್ಟಿಸಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯ ಪ್ರಸ್ತುತ ಸದಸ್ಯ ಬಲ ಮತ್ತು ರಾಜ್ಯವಾರು ಸ್ಥಾನಗಳ ಹಂಚಿಕೆಯನ್ನು ಮುಂದಿನ 25 ವರ್ಷಗಳವರೆಗೆ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. 2029ರ ಲೋಕಸಭಾ ಚುನಾವಣೆಯಿಂದಲೇ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಹಾಗೂ ಅದರೊಳಗೆ ಎಸ್‌ಸಿ ಮತ್ತು ಎಸ್‌ಟಿ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿದೆ. ಈ ವಿಚಾರದಲ್ಲಿ ಪಕ್ಷದ ನಿಲುವು ಸ್ಪಷ್ಟ ಮತ್ತು ಸ್ಥಿರವಾಗಿದೆ ಎಂದು ರಮೇಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *