ಮುಸ್ಲಿಮರ ಮತಗಳಿಂದಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಜಮೀರ್ ಹೇಳಿಕೆಯ ವೀಡಿಯೋ ವೈರಲ್
ದೆಹಲಿ: ಮುಸ್ಲಿಮರೆಲ್ಲಾ ಒಗ್ಗಟ್ಟಾಗಿ ಮತದಾನ ಮಾಡಿದ್ದಕ್ಕೇ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು ಎಂದು ಸಿದ್ದರಾಮಯ್ಯ ಆಪ್ತ ಜಮೀರ್ ಅಹ್ಮದ್ ಅವರ ಹೇಳಿಕೆ ವಿವಾದದ ಬಿರುಗಾಳಿ ಎಬ್ಬಿಸಿದೆ. ಈ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ, ಕಾಂಗ್ರೆಸ್ ಪಕ್ಷವು ದೇಶವನ್ನು ವಿಭಜಿಸುತ್ತದೆ ಎಂಬುದಕ್ಕೆ ಬೇರೆ ಉದಾಹರಣೆ ಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಆಗಸ್ಟ್ 25 ರಂದು ಜೈಪುರ ಪ್ರವಾಸ ಕೈಗೊಂಡಿದ್ದ ಜಮೀರ್ ಅಹ್ಮದ್ ಅವರು ಕಾಂಗ್ರೆಸ್ ನಾಯಕರನ್ನು ಉದ್ದೇಶಿಸಿ ಮಾತಾಡಿದ ಸಂದರ್ಭದ ವೀಡಿಯೋ ವೈರಲ್ ಆಗಿದೆ.
‘ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮುಸ್ಲಿಮರೇ ಕಾರಣ. ಮುಸ್ಲಿಂ ಮತಗಳಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಕರ್ನಾಟಕದ ಮಸೀದಿಗಳಲ್ಲಿ ನಾವು ಸಭೆ ಮಾಡಿ, ಒಗ್ಗಟ್ಟು ಪ್ರದರ್ಶನಕ್ಕೆ ಮನವಿ ಮಾಡಿದ್ದೆವು. ಎಲ್ಲಾ ಹಂತ ರೀಚ್ ಮಾಡಿ ವಿಶ್ವಾಸ ಗಳಿಸಿದೆವು. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು, ರಾಜಸ್ಥಾನದಲ್ಲೂ ಇದೇ ಸೂತ್ರ ಅನುಸರಿಸಿ ಎಂದು ಜಮೀರ್ ಅಹ್ಮದ್ ಕರೆ ನೀಡಿದ್ದರು. ಈ ವೀಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಕಾಂಗ್ರೆಸ್‌ನ ಒಡೆದಾಳುವ ನೀತಿಗೆ ಇದು ಉತ್ತಮ ಉದಾಹರಣೆಯಾಗಿದೆ ಎಂದು ಆಕ್ರೋಶ ಹೊರಹಾಕಿದೆ.
Divide and Rule is the classic playbook of @INCIndia.
In 1947, Nehru divided India to satisfy his power hunger.
In 2023, His grandson @RahulGandhi is using the same tactics to divide India yet again on religious lines.
CM @siddaramaiah's close aide BZ Zameer Ahmed Khan is… pic.twitter.com/mZHcdDczk0
— BJP Karnataka (@BJP4Karnataka) November 2, 2023