ಕೋಟಾ ಪೂಜಾರಿ ಸ್ಥಾನಕ್ಕೆ ಉಪಚುನಾವಣೆ ; ಅ.21ರಂದು ಮತದಾನ
ಉಡುಪಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿನಿಧಿಸುತ್ತಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅ.24ರಂದು ಮತ ಎಣಿಕೆ ನಡೆಯಲಿದೆ.
ಕೋಟಾ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಅವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ಈ ಉಪಚುನಾವಣೆ ನಡೆಯಲಿದೆ.
ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವ ಭಾರತೀಯ ಚುನಾವಣಾ ಆಯೋಗವು, ಅಕ್ಟೋಬರ್ 21ರಂದು ಮತದಾನ ನಡೆಯಲಿದೆ ಎಂದು ತಿಳಿಸಿದೆ.
ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 3 ಕೊನೆಯ ದಿನವಾಗಿದೆ.
ಅಕ್ಟೋಬರ್ 21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.
ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.