ರಾಹುಲ್ ಗಾಂಧಿ ನಿವಾಸದಲ್ಲಿ ‘ದೀಪಾವಳಿ ಮಿಲನ’: ಬಿ.ಕೆ. ಹರಿಪ್ರಸಾದ್ ಭಾಗಿ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನವದೆಹಲಿಯ ಸುನಹರಿ ಬಾಗ್ ರಸ್ತೆಯ ನಿವಾಸದಲ್ಲಿ ಆಯೋಜಿಸಲಾಗಿದ್ದ ‘ದೀಪಾವಳಿ ಮಿಲನ’ ಸೌಹಾರ್ದಕೂಟದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭಾಗವಹಿಸಿದರು.
ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿರುವುದಾಗಿ ಹರಿಪ್ರಸಾದ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಸಂಸದರು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಅವರೊಂದಿಗೆ ಆತ್ಮೀಯವಾಗಿ ಸಮಾಲೋಚನೆ ನಡೆಸಿದ ಹರಿಪ್ರಸಾದ್, ದೇಶದ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ವಿಚಾರ ವಿನಿಮಯ ಮಾಡಿಕೊಂಡರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕಾರ್ಯಕ್ರಮವು ನಾಯಕರ ನಡುವೆ ಸೌಹಾರ್ದ ಮತ್ತು ಪರಸ್ಪರ ಸಂವಾದಕ್ಕೆ ವೇದಿಕೆಯಾಯಿತು ಎಂದು ತಿಳಿಸಿದ್ದಾರೆ.
