‘ಆಟೋ ಡ್ರೈವರ್’ ಡಿ.ಕೆ‌.ಶಿವಕುಮಾರ್.. ಕೈ ನಾಯಕನಿಂದ ಶಂಕರಣ್ಣನ ಸ್ಟೈಲ್

0

ಬೆಂಗಳೂರು:  ರಾಜ್ಯ ರಾಜಧಾನಿಯ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡೆಸಿದ ಸಂವಾದ ಗಮನಸೆಳೆಯಿತು.

ನಟ ಶಂಕರ್ ನಾಗ್ ಅಭಿಮಾನಿ ಸಮೂಹವನ್ನೇ ಹೊಂದಿರುವ ಆಟೋ ಚಾಲಕರು ಸಿನಿಮಾ ಸ್ಟೈಲಲ್ಲೇ ಬಂದ ಕೈ ನಾಯಕ ಡಿ.ಕೆ‌.ಶಿವಕುಮಾರ್ ಅವರು ರಿಕ್ಷಾ ಚಾಲಕರ ಜೊತೆ ಸೆಲ್ಫೀ ತೆಗೆದು ಮೇನಿಯಾ ಸೃಷ್ಟಿಸಿದರು. ತಾನೂ ಆಟೋ ಚಲಾಯಿಸಿ ಸಂಭ್ರಮಿಸಿದರು. 

‘ಇಂದು ನನ್ನ ಜೀವನದಲ್ಲಿ ಬಹಳ ನೆನಪಿನಲ್ಲಿ ಉಳಿಯಲಿರುವ ದಿನ. ಕಾರಣ ಇಂದು ನಾನು ಪವಿತ್ರ ಆಟೋ ಚಾಲನೆ ಮಾಡಿದ ದಿನ. ನಿಮ್ಮ ಕುಟುಂಬದ ಸದಸ್ಯನಾಗಿ ನಾನು ಇಲ್ಲಿ ನಿಂತಿದ್ದೇನೆ. ಇದಕ್ಕಾಗಿ ನನಗೆ ಹೆಮ್ಮೆ ಇದೆ. ನೀವು ಸ್ವಾಭಿಮಾನದ ಬದುಕು ನಡೆಸುತ್ತಿದ್ದೀರಿ. ನೀವು ದೇಶ ಹಾಗೂ ಜನ ಸೇವಕರು. ಮಧ್ಯಮವರ್ಗ ಹಾಗೂ ಜನ ಸಾಮಾನ್ಯರ ಸಾರಥಿಗಳು’ ಎಂದಾಗ ಆಟೋ ಚಾಲಕರ ಪಾಳಯದಲ್ಲಿ ಎಂದಿಲ್ಲದ ಸಂತಸ.

 

ಸಂವಾದದಲ್ಲಿ, ಆಟೋ ಚಾಲಕರ ಸಮಸ್ಯೆಗಳನ್ನು ಆಲಿಸಿದ ಡಿಕೆಶಿ, ಇತ್ತೀಚೆಗೆ ನಡೆಯುತ್ತಿರುವ ಸಮೀಕ್ಷೆಗಳಲ್ಲಿ ಶೇ.80 ರಷ್ಟು ಜನ ಕಾಂಗ್ರೆಸ್ ಪಕ್ಷದ ಪರ ಒಲವು ತೋರಿಸುತ್ತಿದ್ದಾರೆ. ನೀವು ದಿನ ನಿತ್ಯ ಗ್ಯಾಸ್, ಡೀಸೆಲ್ ಮೂಲಕ ಗಾಡಿ ಚಾಲನೆ ಮಾಡುತ್ತಿದ್ದು, ಬೆಲೆ ಏರಿಕೆಯಿಂದ ಸರ್ಕಾರ ನಿಮ್ಮ ಜೇಬನ್ನು ದಿನನಿತ್ಯ ಪಿಕ್ ಪಾಕೆಟ್ ಮಾಡುತ್ತಿದೆ ಎಂದ ಅವರು, ಕೋವಿಡ್ ಸಮಯದಲ್ಲಿ ನಿಮ್ಮ ಬದುಕಿನ ಮೇಲೆ ಬರೆ ಹಾಕಿದರು. ಈ ಸಮಯದಲ್ಲಿ ನಾವು ಚಾಲಕರಿಗೆ ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಗ್ರಹ ಮಾಡಿದೆವು. ಪ್ರತಿ ತಿಂಗಳು10 ಸಾವಿರ ರೂ. ಪರಿಹಾರ ನೀಡುವಂತೆ ಕೇಳಿದೆವು. ಆದರೆ ಈ ಸರ್ಕಾರ 5 ಸಾವಿರ ಘೋಷಣೆ ಮಾಡಿ, ಒಂದು ತಿಂಗಳೂ ಅದನ್ನು ಸರಿಯಾಗಿ ನೀಡಲಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ನಮ್ಮ ಹಿರಿಯ ನಾಯಕ ಆಸ್ಕರ್ ಫರ್ನಾಂಡೀಸ್ ಅವರು ಪಕ್ಷದಲ್ಲಿ ಚಾಲಕರ ವಿಭಾಗ ಆರಂಭಿಸಬೇಕು ಎಂದು ಸಲಹೆ ನೀಡಿದರು. ಅವರ ಸಲಹೆಯಂತೆ ಪಕ್ಷದಲ್ಲಿ ಚಾಲಕರ ಘಟಕ ಆಂರಂಭಿಸಿದ್ದೆವೆ. ಆ ಮೂಲಕ ನಿಮ್ಮ ಮನೆ ಸದಸ್ಯರಾಗಿದ್ದೇವೆ ಎಂದವರು ತಿಳಿಸಿದರು.

ಪೊಲೀಸರು ನಿಮಗೆ ನೀಡುತ್ತಿರುವ ಕಿರುಕುಳ ತಪ್ಪಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುವುದು. ಮುಂದೆ ನಿಮ್ಮ ಕಾಂಗ್ರೆಸ್ ಸರ್ಕಾರ ಬರಲಿದೆ. ನಿಮ್ಮ ಹೋರಾಟದ ದಿಕ್ಕು ಮೇ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ತರುವತ್ತ ಇರಬೇಕು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಆಟೋಗಳ ಮೇಲೆ ಹಾಕಿಕೊಂಡು ಪ್ರಚಾರ ಮಾಡುತ್ತಿರುವವರಿಗೆ ಧನ್ಯವಾದಗಳು. ಈ ಹೊಸ ವರ್ಷದ ಸಂದರ್ಭದಲ್ಲಿ ನಿಮಗೆ ಒಳ್ಳೆಯದಾಗಲಿ, ನಾನು ನಮ್ಮ ಪಕ್ಷದ ನಾಯಕರೆಲ್ಲರೂ ನಿಮ್ಮ ಜತೆ ಇರುತ್ತೇವೆ ಎಂದು ಡಿಕೆಶಿ ಆಟೋ ಚಾಲಕರಿಗೆ ಭರವಸೆ ನೀಡಿದರು.

Leave a Reply

Your email address will not be published. Required fields are marked *

You may have missed