ದೊಡ್ಡಬಳ್ಳಾಪುರ: ಹಿಟ್ ಅಂಡ್ ರನ್’ಗೆ ಓರ್ವ ಬಲಿ

Doddaballapur- Hit and Run- Youth dies

ಬೆಂಗಳೂರು: ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣದ ಬಳಿ ಹಿಟ್ ಅಂಡ್ ರನ್ ಗೆ ಯುವಕನೊಬ್ಬ ಬಲಿಯಾಗಿದ್ದಾನೆ. ರೈಲ್ವೆ ನಿಲ್ದಾಣದಲ್ಲಿ ಮೂಟೆ ಹೊತ್ತು ಕೂಲಿ ಕೆಲಸ ಮಾಡಿಕೊಳ್ಳುತ್ತಿದ್ದ ಮುತ್ತೂರು ನಿವಾಸಿ ಖಾದರ್ ಪಾಷ (26) ಎಂಬ ಯುವಕ ಸಾವನ್ನಪ್ಪಿದ್ದಾನೆ.

ಎಂದಿನಂತೆ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬರುವಾಗ ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಅಪಘಾತಕ್ಕೆ ಕಾರಣವಾದ ವಾಹನ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾನೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

You may have missed