ಇಲಾಖೆಗಳ ವಿದ್ಯುತ್ ಬಿಲ್ ಪಾವತಿಗೂ ಸರ್ಕಾರದ ಬಳಿ ಹಣ ಇಲ್ಲ? ಬಿಜೆಪಿ ವ್ಯಂಗ್ಯ

0
Power-Current-Gruha-Jyothi-300x160

ಬೆಂಗಳೂರು: ವಿದ್ಯುತ್ ಕ್ಷೇತ್ರದಲ್ಲಿ ರಾಜ್ಯದ ಹೀನಾಯ ಸ್ಥಿತಿ ಬಗ್ಗೆ ಪ್ರತಿಪಕ್ಷ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತ ಪರಿಸ್ಥಿತಿಯತ್ತ ಬೊಟ್ಟು ಮಾಡಿದ ವಿಜಯೇಂದ್ರ, ರಾಜ್ಯದ ವಿವಿಧ ಇಲಾಖೆಗಳ ಕಚೇರಿಗಳಿಂದ ₹6 ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಪಾವತಿ ಬಾಕಿ ಇದ್ದು, ಅದರ ವಸೂಲಿಗೆ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ ಎಂದು ಸ್ವತಃ ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ ಎಂದು ಗಮನಸೆಳೆದರು.

ರಾಜ್ಯದ ಯಾವ ಇಲಾಖೆಗಳಲ್ಲೂ ವಿದ್ಯುತ್ ಬಿಲ್ ಪಾವತಿಸುವಷ್ಟೂ ಹಣ ಇಲ್ಲದೆ ಇರುವ ದಾರುಣ ಪರಿಸ್ಥಿತಿಗೆ ತಲುಪಿರುವುದಕ್ಕೆ ಯಾರು ಹೊಣೆಗಾರರು ಎನ್ನುವುದನ್ನು ಮುಖ್ಯಮಂತ್ರಿಗಳೇ ತಿಳಿಸಬೇಕಿದೆ ಎಂದು ವಿಜಯೇಂದ್ರ ಹೇಳಿದರು.

Leave a Reply

Your email address will not be published. Required fields are marked *