ಪಂಚ ರಾಜ್ಯಗಳ ಚುನಾವಣೆ; ನ.7ರಿಂದ ಮತದಾನ, ಡಿ.5ರಂದು ಫಲಿತಾಂಶ
ದೆಹಲಿ: ತೀವ್ತ ಕುತೂಹಲ ಕೆರಳಿಸಿರುವ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಬಗ್ಗೆ ನಿರ್ಣಾಯಕ ಹೋರಾಟದ ದಿಕ್ಸೂಚಿ ಎಂದೇ ಪರಿಗಣಿಸಲಾಗಿರುವ ಪಂಚ ರಾಜ್ಯಗಳ ಚುನಾವಣೆ ಘೋಷಣೆಯಾಗಿದೆ.
ದೇಶದ ಮತ್ತೊಂದು ಮಿನಿ ಮಹಾಸಮರ ಎಂದೇ ಬಿಂಬಿತವಾಗಿರುವ ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭಾ ಮತಸಮರಕ್ಕೆ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿ ಮಾಡಿದೆ. ಈ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕ ಪ್ರಕಟಿಸಿದರು. ಮಿಜೋರಾಂ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ನಕ್ಸಲ್ ಸಂಘರ್ಷ ಪೀಡಿತ ಛತ್ತೀಸ್ ಘಡದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದೆ. ಎಂದವರು ಮಾಹಿತಿ ಒದಗಿಸಿದರು.
ಮಿಜೋರಾಂ ನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದೆ.
ಛತ್ತೀಸ್ ಘಡದಲ್ಲಿ ನವೆಂಬರ್ 7 ಮತ್ತು 17ರಂದು ಮತದಾನ ನಡೆಯಲಿದೆ.
ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ಮತದಾನ.
ರಾಜಸ್ಥಾನದಲ್ಲಿ ನವೆಂಬರ್ 23ರಂದು ಮತದಾನ.
ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ.
ಡಿಸೆಂಬರ್ 5ರಂದು ಮತ ಎಣಿಕೆ ನಡೆಯಲಿದೆ.