ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ವಿಧಿವಶ; ಗಣ್ಯರ ಕಂಬನಿ

0
shivananda-ambadagatti-Ex-MLA-300x194

ಧಾರವಾಡ: ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ ವಿಧಿವಶರಾಗಿದ್ದಾರೆ. ಸಜ್ಜನ ರಾಕಾರಣಿಯಾಗಿದ್ದ, ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

‘ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಶಾಸಕರಾದ ಶಿವಾನಂದ ಅಂಬಡಗಟ್ಟಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ ಎಂದಿರುವ ಡಿಕೆಶಿ, ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದರೂ ನಂತರ ಎಸ್.ಎಂ. ಕೃಷ್ಣ ಅವರ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು. ಧಾರವಾಡ ಜಿಲ್ಲೆಯ ಪಕ್ಷ ಸಂಘಟನೆಯಲ್ಲಿ ಸಾಕಷ್ಟು ಶ್ರಮ ವಹಿಸಿದ್ದರು ಎಂದು ಸ್ಮರಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಜಿಲ್ಲೆಯ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ಇವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ಕೊಡಲೆಂದು ಶಿವಕುಮಾರ್ ಪ್ರಾರ್ಥಿಸಿದ್ದಾರೆ..

Leave a Reply

Your email address will not be published. Required fields are marked *