ಕರ್ನಾಟಕದಲ್ಲಿ ಮೊದಲ ಕೋವಿಡ್ ಸಾವು; 38 ಸಕ್ರಿಯ ಪ್ರಕರಣಗಳು

0
corona-covid1-300x175

ಬೆಂಗಳೂರು: ಕರ್ನಾಟಕ ಆರೋಗ್ಯ ಇಲಾಖೆ ಹೊರಡಿಸಿದ ಅಧಿಕೃತ ಹೇಳಿಕೆಯ ಪ್ರಕಾರ ಬೆಂಗಳೂರಿನಲ್ಲಿ ಮೊದಲ ಕೋವಿಡ್ -19 ಸಾವು ವರದಿಯಾಗಿದೆ. ಶನಿವಾರ ರೋಗಿಯು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಆದಾಗಿಯೂ ಕಳೆದೆರಡು ದಿನಗಳಲ್ಲಿ 108 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಐವರಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟು38 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ಸರ್ಕಾರ ತಿಳಿಸಿದೆ.

ಒಟ್ಟು 38 ಸಕ್ರಿಯ ಪ್ರಕರಣಗಳಲ್ಲಿ 32 ಬೆಂಗಳೂರಿನಿಂದ ವರದಿಯಾಗಿದೆ. ನಗರದಲ್ಲಿ ಒಟ್ಟು 92 ಜನರು ಪರೀಕ್ಷೆಗೆ ಒಳಗಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ ಇಬ್ಬರು ವ್ಯಕ್ತಿಗಳು ಪಾಸಿಟಿವ್ ಆಗಿದ್ದಾರೆ ಎಂದು ವರದಿ ತಿಳಿಸಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಮಂಗಳೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತಲಾ ಒಂದು ಸಕ್ರಿಯ ಪ್ರಕರಣಗಳು ವರದಿಯಾಗಿವೆ ಮತ್ತು ಮೈಸೂರು ಜಿಲ್ಲೆಯಲ್ಲಿ ಎರಡು ಸಕ್ರಿಯ ಪ್ರಕರಣಗಳು ವರದಿಯಾಗಿವೆ ಎಂದು ವರದಿ ತಿಳಿಸಿದೆ.

ಮುಂಬೈನಿಂದ ಹಿಂದಿರುಗಿದ ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬೆಳಗಾವಿಯಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಅವರು ಕಳೆದ ತಿಂಗಳು ಪುಣೆಗೆ ಪ್ರಯಾಣಿಸಿದ್ದರು.

ಧಾರವಾಡ ಸೇರಿದಂತೆ ಹಲವು ಜಿಲ್ಲಾ ಆಸ್ಪತ್ರೆಗಳು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಪ್ರತ್ಯೇಕವಾಗಿ 10 ಹಾಸಿಗೆಗಳ ಐಸಿಯು ವಾರ್ಡ್ ಅನ್ನು ತೆರೆದಿವೆ.

ಕರ್ನಾಟಕದಾದ್ಯಂತ ಎಂಟು ವೈದ್ಯಕೀಯ ಕಾಲೇಜುಗಳಲ್ಲಿ ಭಾನುವಾರದಿಂದ ಕೋವಿಡ್ ಪರೀಕ್ಷೆಗಳನ್ನು ಪ್ರಾರಂಭಿಸಲು ಆರೋಗ್ಯ ಇಲಾಖೆಗೆ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ ಎಂದು ಮೂಲಗಳು ದೃಢಪಡಿಸಿವೆ.

Leave a Reply

Your email address will not be published. Required fields are marked *

You may have missed