ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ; ಇಸ್ರೋ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ

ಶ್ರೀಹರಿಕೋಟ: ಮಾನವಸಹಿತ ಗಗನಯಾನ​ದಲ್ಲೂ ಭಾರತ ಯಶೋಗಾಥೆಗೆ ಮುನ್ನುಡಿ ಬರೆದಿದೆ. ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ಯಶಸ್ವಿಯಾಗಿದ್ದು ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ವಾಹಕದ ಉಡಾವಣೆ ಯಶಸ್ವಿಯಾಗಿ ನೆರವೇರಿದೆ.

ಇಂದು ಬೆಳಗ್ಗೆ 10 ಗಂಟೆಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ವಾಹಕದ ಉಡಾವಣೆ ಯಶಸ್ವಿಯಾಗಿ ನೆರವೇರಿದೆ ಎಂದು ಇಸ್ರೋ ಹೇಳಿದೆ. ಕ್ರ್ಯೂ ಮಾಡೆಲ್, ಕ್ರ್ಯೂ ಎಸ್ಕೇಪ್​ ಮಾಡೆಲ್​​ ಒಳಗೊಂಡ ಎರಡೂ ಮಾಡೆಲ್​ಗಳನ್ನು ಹೊತ್ತ ರಾಕೆಟನ್ನು ಭೂಮಿಯಿಂದ 17 ಕಿ.ಮೀ. ಎತ್ತರಕ್ಕೆ ಹಾರಿಸಲಾಗಿತ್ತು. ರಾಕೆಟ್​​ನಿಂದ ಬೇರ್ಪಟ್ಟು ಕ್ರ್ಯೂ ಮಾಡೆಲ್ ಮತ್ತು ಕ್ರ್ಯೂ ಎಸ್ಕೇಪ್​ ಮಾಡೆಲ್​ಗಳು ಪ್ಯಾರಚೂಟ್ ಮೂಲಕ ಯಶಸ್ವಿಯಾಗಿ ಭೂಮಿಗೆ ಇಳಿದಿವೆ.

ಈ ಬಗ್ಗೆ ಪ್ರತಿಯಿಸಿರುವ ಇಸ್ರೋ ಮುಖ್ಯಸ್ಥ ಸೋಮನಾಥ್​​​​, ನೌಕೆ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿದ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

You may have missed